ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನದಿಂದ ಕೆಳಗೆ ಬಿದ್ದ ಗಗನಸಖಿ!
ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನದಿಂದ ಗಗನಸಖಿಯೊಬ್ಬರು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.

Published On :
ಮುಂಬೈ: ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನದಿಂದ ಗಗನಸಖಿಯೊಬ್ಬರು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.
ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ಹಾರಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನ ಎಐ 864ದಲ್ಲಿ ಈ ಘಟನೆ ನಡೆದಿದ್ದು, ವಿಮಾನ ಚಾಲನೆಯಾಗುತ್ತಿದ್ದಂತೆಯೇ ವಿಮಾನದಲ್ಲಿದ್ದ ಸುಮಾರು 53 ವರ್ಷದ ಗಗನಸಖಿಯೊಬ್ಬರು ವಿಮಾನದ ಬಾಗಿಲು ಮುಚ್ಚಲು ಪ್ರಯತ್ನಿಸಿದ್ದಾರೆ. ಈ ವೇಳೆ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ವಿಮಾನದ ಪುಷ್ ಬ್ಯಾಕ್ ಬಾಗಿಲು ಮುಚ್ಚುವ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದ್ದು, ತೀವ್ರ ಗಾಯಗೊಂಡಿರುವ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈ ವರೆಗೂ ಏರ್ ಇಂಡಿಯಾ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


