#MeToo: ವಿಂತಾ ನಂದಾ ವಿರುದ್ಧ ಮಾನಹಾನಿ ಕೇಸ್, 1 ರು. ಪರಿಹಾರ ಕೇಳಿದ ಅಲೋಕ್ ನಾಥ್
#MeToo ಅಭಿಯಾನದಲ್ಲಿ ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಆರೋಪ ಮಾಡಿದ್ದ ಲೇಖಕಿ ಹಾಗೂ...

Published On :
ಮುಂಬೈ: #MeToo ಅಭಿಯಾನದಲ್ಲಿ ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ಆರೋಪ ಮಾಡಿದ್ದ ಲೇಖಕಿ ಹಾಗೂ ನಿರ್ಮಾಪಕಿ ವಿಂತಾ ನಂದಾ ವಿರುದ್ಧ ನಟ ಅಲೋಕ್ ನಾಥ್ ಅವರು ಸೋಮವಾರ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ.
ತಮ್ಮ ವಿರುದ್ಧದ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಂತಾ ನಂದಾ ಲಿಖಿತ ಕ್ಷಮೆ ಕೇಳಬೇಕು ಮತ್ತು 1 ರುಪಾಯಿ ಪರಿಹಾರ ನೀಡಬೇಕು ಎಂದು ಕೋರಿ ಅಲೋಕ್ ನಾಥ್ ಅವರು ಕೇಸ್ ದಾಖಲಿಸಿದ್ದಾರೆ.
ಅಲೋಕ್ ನಾಥ್ ಅವರು ತಮ್ಮ ಪತ್ನಿ ಜತೆ ಸೇರಿ ಜಂಟಿಯಾಗಿ ದೂರು ದಾಖಲಿಸಿದ್ದು, ನನ್ನ ಮಾನಹಾನಿ ಮಾಡಿದ್ದಕ್ಕೆ 1 ರು. ಪರಿಹಾರ ನೀಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅಲೋಕ್ ನಾಥ್ ಅವರು ಈ ಹಿಂದೆ ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಲು ಆಗುತ್ತಿಲ್ಲ, ಒಪ್ಪಲು ಆಗುತ್ತಿಲ್ಲ ಎಂದು ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


