#MeToo ಸಮಾಜದ ಪ್ರತಿಫಲನ- ಪ್ರಕಾಶ್ ಜಾವಡೇಕರ್
ದೇಶದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ವಿರುದ್ಧ ಆರಂಭವಾಗಿರುವ #MeToo ಅಭಿಯಾನ ಸಮಾಜದಲ್ಲಿ ಏನು ನಡೆಯುತ್ತಿದೆ

ನವದೆಹಲಿ: ದೇಶದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ವಿರುದ್ಧ ಆರಂಭವಾಗಿರುವ #MeToo ಅಭಿಯಾನ ಸಮಾಜದಲ್ಲಿ ಏನು ನಡೆಯುತ್ತಿದೆ ಎಂಬುದರ ಪ್ರತಿಫಲನವಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅಭಿಪ್ರಾಯಪಟ್ಟಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಜಾವಡೇಕರ್ , ಹೇಗೆ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂಬುದರ ಬಗ್ಗೆ ಪ್ರಭುಪಾದ ಸ್ವಾಮಿ ಯಾವಾಗಲೂ ಹೇಳುತ್ತಿರುತ್ತಾರೆ. ಒಂದು ವೇಳೆ ಗುಣಗಳನ್ನು ಕಳೆದುಕೊಂಡ್ಡರೆ, ನಿಜವಾಗಿಯೂ ನಷ್ಟ ಅನುಭವಿಸಿದಂತೆ ಎಂದರು.
2008 ರಲ್ಲಿ ಚಿತ್ರವೊಂದರ ಚಿತ್ರೀಕರಣ ಸಂದರ್ಭದಲ್ಲಿ ಬಾಲಿವುಡ್ ನಟ ನಾನಾ ಪಾಟೇಕರ್ ವಿರುದ್ದ ನಟಿ ತನುಶ್ರಿ ದತ್ತಾ ಲೈಂಗಿಕ ಕಿರುಕುಳ ಆರೋಪ ಮಾಡಿದ ನಂತರ ಚಿತ್ರೋಧ್ಯಮ, ಮಾಧ್ಯಮ, ಕಾರ್ಪೋರೇಟ್ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಮಹಿಳೆಯರು ತಮ್ಮ ಮೇಲಿನ ಲೈಂಗಿಕ ಕಿರುಕುಳ ವಿಚಾರವನ್ನು #MeToo ಅಭಿಯಾನದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


