ದೇಶಾದ್ಯಂತ #MeToo ಅಬ್ಬರ, ಆದರೂ ಮಹಿಳಾ ಆಯೋಗಕ್ಕೆ ದೂರೇ ಬಂದಿಲ್ಲ!
ದೇಶದಾದ್ಯಂತ #ಮೀ ಟೂ ಅಭಿಯಾನ ತೀವ್ರ ಸಂಚಲನ ಮೂಡಿಸಿದ್ದು, ದೂರು ದಾಖಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಮಹಿಳೆಯರಿಗೆ ಧೈರ್ಯ ನೀಡಿದ್ದರೂ, ಈ ವರೆಗೂ ಒಂದು ಪ್ರಕರಣ ಕೂಡ ದಾಖಲಾಗಿಲ್ಲ...

Published On :
ನವದೆಹಲಿ: ದೇಶದಾದ್ಯಂತ #ಮೀ ಟೂ ಅಭಿಯಾನ ತೀವ್ರ ಸಂಚಲನ ಮೂಡಿಸಿದ್ದು, ದೂರು ದಾಖಲಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಮಹಿಳೆಯರಿಗೆ ಧೈರ್ಯ ನೀಡಿದ್ದರೂ, ಈ ವರೆಗೂ ಒಂದು ಪ್ರಕರಣ ಕೂಡ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ದೌರ್ಜನ್ಯಕ್ಕೊಳಗಾದ ಮಹಿಳೆಯರು ದೂರು ದಾಖಲಿಸಿದ ಬಳಿಕ ಅವರಿಗೆ ಎಲ್ಲಾ ರೀತಿಯ ಕಾನೂನು ನೆರವು ನೀಡುವುದಾಗಿ ತಿಳಿಸಿದ್ದೆವು. ಆದರೂ ಒಬ್ಬ ಮಹಿಳೆ ಕೂಡ ಮುಂದಕ್ಕೆ ಬಂದು ದೂರು ದಾಖಲಿಸಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಅವರು ಹೇಳಿದ್ದಾರೆ.
ಸಂತ್ರಸ್ತ ಮಹಿಳೆಯರು ಮುಂದಕ್ಕೆ ಬಂದು ದೂರು ದಾಖಲಿಸದೇ ಹೋದರೆ, ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಕಾನೂನು ನೆರವು ಅಗತ್ಯವಿರುವುದು ನಮಗೆ ತಿಳಿಯುವುದಿಲ್ಲ. ದೂರುದಾರರ ಹೇಳಿಕೆಗಳು ಅಗತ್ಯವಿರುವುದರಿಂದ ನಾವು ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


