ಲೈಂಗಿಕ ಕಿರುಕುಳ ಆರೋಪ: ಎನ್ಎಲ್'ಯುಐ ಅಧ್ಯಕ್ಷ ಸ್ಥಾನ ತೊರೆದ ಫೈರೋಜ್ ಖಾನ್
ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್'ಯುಐ) ಅಧ್ಯಕ್ಷ ಸ್ಥಾನಕ್ಕೆ ಫೈರೋಜ್ ಖಾನ್ ಮಂಗಳವಾರ ರಾಜಿನಾಮೆ ನೀಡಿದ್ದಾರೆ...

Published On :
ನವದೆಹಲಿ: ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್'ಯುಐ) ಅಧ್ಯಕ್ಷ ಸ್ಥಾನಕ್ಕೆ ಫೈರೋಜ್ ಖಾನ್ ಮಂಗಳವಾರ ರಾಜಿನಾಮೆ ನೀಡಿದ್ದಾರೆ.
ಫೈರೋಜ್ ಖಾನ್ ವಿರುದ್ಧ ಮಹಿಳೆಯರೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಪ್ರಕರಣ ಸಂಬಂಧ ಕಾಂಗ್ರೆಸ್ ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಿತ್ತು. ಇದಲ್ಲದೆ, ಛತ್ತೀಸ್ಗಢದ ಕಾಂಗ್ರೆಸ್ ಕಾರ್ಯಕರ್ತೆಯಾಗಿರುವ ಯುವತಿ ಪೊಲೀಸರಿಗೆ ದೂರು ದಾಖಲಿಸಿದ್ದಳು. ಅಲ್ಲದೆ, ತನ್ನ ಜೀವಕ್ಕೆ ಬೆದರಿಕೆಯಿಂದೆ ಎಂದೂ ಕೂಡ ಹೇಳಿಕೊಂಡಿದ್ದಳು.
ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಫೈರೋಜ್ ಖಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಅಂಗೀಕರಿಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Resignationರಾಜೀನಾಮೆಲೈಂಗಿಕ ಕಿರುಕುಳRahul Gandhiರಾಹುಲ್ ಗಾಂಧಿSexual harassmentಎನ್ಎಸ್\'ಯುಐFairoz KhanNSUI chiefಫೈರೋಜ್ ಖಾನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


