ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: 3 ಉಗ್ರರನ್ನು ಸದೆಬಡಿದ ಸೇನೆ, ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಫತೇಹ್ ಕಡಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಫತೇಹ್ ಕಡಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಶ್ರೀನಗರದ ಫತೇಹ್ ಕಡಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಭಾರತೀಯ ಸೇನಾಪಡೆ ಹಾಗೂ ಸಿಆರ್'ಪಿಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆಗಿಳಿದಿದ್ದವು.
ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತವರೆದ ಭದ್ರತಾ ಪಡೆಗಳು ಉಗ್ರರ ವಿರುದ್ಧ ಎನ್'ಕೌಂಟರ್ ನಡೆಸಲು ಆರಂಭಿಸಿದ್ದಾರೆ.
ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿಗಳು ಲಭ್ಯವಾಗಿತ್ತು. ಹೀಗಾಗಿ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಾರ್ಯಾಚರಣೆ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಅಲ್ಲದೆ, ಅರೆಸೇನಾ ಪಡೆಯ ಅಧಿಕಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಹಿರಿಯ ಪೊಲೀಸ್ ಅಧಿಕಾರಿ ಇಮಿತಿಯಾಜ್ ಇಸ್ಮಾಯಿಲ್ ಅವರು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಎನ್'ಕೌಂಟರ್ ನಡೆಸಿದ್ದ ಭದ್ರತಾ ಪಡೆಗಳು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಟಾಪ್ ಕಮಾಂಡ್ ಎಂದೇ ಹೇಳಲಾಗುತ್ತಿದ್ದ ಮನನ್ ವಾನಿ ಹಾಗೂ ಮತ್ತೊಬ್ಬ ಉಗ್ರ ಆಶಿಖ್ ಹುಸೇನ್ ಜರ್ಗರ್'ರನ್ನು ಹತ್ಯೆ ಮಾಡಿತ್ತು.
ಬಾರಾಮುಲ್ಲಾ: ಭದ್ರತಾ ಪಡೆಗಳ ಮೇಲೆ ಉಗ್ರರ ದಾಳಿ, 2 ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಪಟ್ಟನ್ ಎಂಬಲ್ಲಿ ಭದ್ರತಾ ಪಡೆಗಳ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಸೇನಾಪಡೆಗಳು ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗದ ಮಧ್ಯೆ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಗಾಯಗೊಂಡ ಯೋಧರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗುತ್ತಿದ್ದು, ಉಗ್ರರಿಗಾಗಿ ಭದ್ರತಾ ಪಡೆಗಳು ತೀವ್ರ ಹುಡುಕಾಟ ಆರಂಭಿಸಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


