ಇಂಡಿಗೋ ಗಗನಸಖಿಯ ಹಿಂಭಾಗ ಮುಟ್ಟಿ ಅಸಭ್ಯ ವರ್ತನೆ: ಬೆಂಗಳೂರು ಯುವಕನ ಬಂಧನ!
ವಿಮಾನದಲ್ಲಿ ಗಗನಸಖಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬೆಂಗಳೂರಿನ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ...

Published On :
ಮುಂಬೈ: ವಿಮಾನದಲ್ಲಿ ಗಗನಸಖಿಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬೆಂಗಳೂರಿನ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಇಂಡಿಗೋ ವಿಮಾನದಲ್ಲಿ ಬೆಂಗಳೂರಿನ ಯುವಕ 28 ವರ್ಷದ ರಾಜು ಗಂಗಪ್ಪ ಮುಂಬೈನಿಂದ ಬೆಂಗಳೂರಿನತ್ತ ಹೊರಟ್ಟಿದ್ದರು. ಈ ವೇಳೆ ವಿಮಾನದಲ್ಲಿ ಗಗನಸಖಿಯ ಹಿಂಭಾಗವನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ.
ಇದರಿಂದ ನೊಂದ ಗಗನಸಖಿ ಹಿರಿಯ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ಕೂಡಲೇ ಕ್ರಮ ಕೈಗೊಂಡ ಸಿಬ್ಬಂದಿ ರಾಜು ಗಂಗಪ್ಪನನ್ನು ಲಗೇಜು ಸಮೇತ ವಿಮಾನದಿಂದ ಕೆಳಗಿಳಿಸಿದ್ದಾರೆ. ನಂತರ ಮುಂಬೈನ ಏರ್ ಪೋರ್ಟ್ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಲೈಂಗಿಕ ಕಿರುಕುಳ ನೀಡಿದ ಆರೋಪ ಹಿನ್ನೆಲಯಲ್ಲಿ ರಾಜು ಗಂಗಪ್ಪ ವಿರುದ್ಧ ಐಪಿಸಿ ಸೆಕ್ಷನ್ 354 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruArrestಲೈಂಗಿಕ ಕಿರುಕುಳಬಂಧನManವ್ಯಕ್ತಿಗಗನಸಖಿmolestingIndiGo flightಇಂಡಿಗೋ ವಿಮಾನair hostess
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


