ನಿಮ್ಮನ್ನು ಮಂದಿರ ಕಟ್ಟದಂತೆ ತಡೆದಿರುವವರಾದರೂ ಯಾರು?: ಭಾಗ್ವತ್ ಗೆ ಓವೈಸಿ
ವಿಜಯದಶಮಿ ಅಂಗವಾಗಿ ಭಾಷಣ ಮಾಡಿದ್ದ ಮೋಹನ್ ಭಾಗ್ವತ್ ರಾಮ ಮಂದಿರದ ಬಗ್ಗೆ ಮಾತನಾಡಿದ್ದರು. ಈ ಬೆನ್ನಲ್ಲೇ ಅಸಾವುದ್ದೀನ್ ಓವೈಸಿ ಭಾಗ್ವತ್ ಅವರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

Published On :
ಹೈದರಾಬಾದ್: ವಿಜಯದಶಮಿ ಅಂಗವಾಗಿ ಭಾಷಣ ಮಾಡಿದ್ದ ಮೋಹನ್ ಭಾಗ್ವತ್ ರಾಮ ಮಂದಿರದ ಬಗ್ಗೆ ಮಾತನಾಡಿದ್ದರು. ಈ ಬೆನ್ನಲ್ಲೇ ಅಸಾವುದ್ದೀನ್ ಓವೈಸಿ ಭಾಗ್ವತ್ ಅವರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ದೇಶದ ಆತ್ಮಗೌರವದ ದೃಷ್ಟಿಯಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಅನಿವಾರ್ಯ ಎಂದಿದ್ದ ಮೋಹನ್ ಭಾಗ್ವತ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಓವೈಸಿ, " ನಿಮ್ಮನ್ನು ಹಾಗೂ ನಿಮ್ಮ ಸರ್ಕಾರವನ್ನು ಮಂದಿರ ಕಟ್ಟದಂತೆ ತಡೆದಿರುವವರಾದರೂ ಯಾರು ಎಂದು ಪ್ರಶ್ನಿಸಿದ್ದಾರೆ.
ಮೋಹನ್ ಭಾಗ್ವತ್ ಅವರ ಹೇಳಿಕೆ ದೇಶ ಏಕಚಕ್ರಾಧಿಪತ್ಯಕ್ಕೆ ಸಿಲುಕಿರುವ ಅತ್ಯುತ್ತಮ ಉದಾಹರಣೆ, ಬಿಜೆಪಿ ಹಾಗೂ ಆರ್ ಎಸ್ಎಸ್ ಏಕಚಕ್ರಾಧಿಪತ್ಯದಲ್ಲಿ, ನಿರಂಕುಶವಾದದಲ್ಲಿ ನಂಬಿಕೆ ಹೊಂದಿದೆ. ಬಿಜೆಪಿ ಹಾಗೂ ಆರ್ ಎಸ್ಎಸ್ ನಾಯಕರಿಗೆ ಬಹುತ್ವ ಹಾಗೂ ಕಾನೂನಿನ ಮೇಲೆ ನಂಬಿಕೆ ಇಲ್ಲ ಎಂದು ಓವೈಸಿ ಹೇಳಿದ್ದಾರೆ.
ಸರ್ಕಾರ ಯಾವುದೇ ನಿರ್ದಿಷ್ಟ ಧರ್ಮಕ್ಕೆ ಅನುಗುಣವಾಗಿ ನಡೆಯುವುದಕ್ಕೆ ಸಾಧ್ಯವಿಲ್ಲ ಹಾಗೆ ಒಂದು ವೇಳೆ ಆದರೆ ಅದು ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಗೆ ಈ ಬಗ್ಗೆ ತಿಳುವಳಿಕೆ ಇಲ್ಲ ಎಂದು ಓವೈಸಿ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Ram MandirMohan Bhagwatಮೋಹನ್ ಭಾಗ್ವತ್ರಾಮ ಮಂದಿರOwaisiಓವೈಸಿVijayadashami Speech 2018ವಿಜಯದಶಮಿ ಸಂದೇಶ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


