ಎಲ್ಲೆಡೆ ದಸರಾ ಸಂಭ್ರಮ: ನಾಡ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್
ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ...

Published On :
ನವದೆಹಲಿ: ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಕನ್ನಡ ನಾಡಿನ ಜನತೆಗೆ ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಕೋವಿಂದ್ ಅವರು ವಿಜಯದಶಮಿ ಹಾಗೂ ನವರಾತ್ರಿಯ ಶುಭಾಶಯಗಳನ್ನು ಕೋರಿದ್ದಾರೆ.
ವಿಜಯದಶಮಿ ಹಾಗೂ ದುರ್ಗಾಪೂಜೆಯ ಶುಭ ಸಂದರ್ಭದಲ್ಲಿ ದೇಶದ ಸಹ ನಾಗರೀಕರೆಲ್ಲ್ರಿಗೂ ದಸರಾ ಹಬ್ಬದ ಶುಭಾಶಯಗಳು. ದಸರಾ ಹಬ್ಬವು ಸಮಾಜದಲ್ಲಿನ ದುಷ್ಟಶಕ್ತಿಗಳ ಮೇಲೆ ಶಿಷ್ಟಶಕ್ತಿಗಳ ಗೆಲವಿನ ವಿಜಯೋತ್ಸವವಾಗಿದೆ. ದಸರಾ ಮಹೋತ್ಸವವು ನಮ್ಮೆಲ್ಲರ ಕುಟುಂಬದ ಸದಸ್ಯರೆಲ್ಲರಿಗೂ ಹಾಗೂ ನಮ್ಮ ಸಮಾಜದ ಎಲ್ಲಾ ವರ್ಗಗಳ ಸದಸ್ಯರಿಗೂ ಶುಭವನ್ನುಂಟು ಮಾಡಲಿ ಎಂದು ಹೇಳಿದ್ದಾರೆ.
ರಾಷ್ಟ್ರಪತಿಗಳು ಕನ್ನಡವಷ್ಟೇ ಅಲ್ಲದೆ, ಹಿಂದಿ ಹಾಗೂ ಇಂಗ್ಲೀಷ್, ತಮಿಳು, ಮಲೆಯಾಳಂ, ತೆಲುಗು ಸೇರಿ ಹಲವು ಭಾಷೆಗಳಲ್ಲೂ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ರಾಷ್ಟ್ರಪತಿಗಳು ಕನ್ನಡದಲ್ಲಿಯೇ ಟ್ವೀಟ್ ಮಾಡಿ ಶುಭಾಶಯಗಳನ್ನು ಕೋರಿರುವ ಹಿನ್ನಲೆಯಲ್ಲಿ ಹಲವು ಕನ್ನಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿ, ಧನ್ಯವಾದಗಳನ್ನು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


