ಶಬರಿಮಲೆಗೆ ಕಾರ್ಯಕರ್ತರೆಯರ ಪ್ರವೇಶಕ್ಕೆ ಬೆಂಬಲ ನೀಡುವುದಿಲ್ಲ: ಕೇರಳ ಸರ್ಕಾರ
ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶದ ಬಗ್ಗೆ ಸರ್ಕಾರ ತನ್ನ ನಿಲುವನ್ನು ಮತ್ತೊಮ್ಮೆ ...

ಪಾಂಬಾ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶದ ಬಗ್ಗೆ ಸರ್ಕಾರ ತನ್ನ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದು, ಮಹಿಳಾ ಕಾರ್ಯಕರ್ತರ ಪ್ರವೇಶವನ್ನು ಸರ್ಕಾರ ಪ್ರೋತ್ಸಾಹ ನೀಡುವುದಿಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಕಡಕಂಪಳ್ಳಿ ಸುರೇಂದ್ರನ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ತಿಳಿಸಿದ್ದಾರೆ.
ಅಯ್ಯಪ್ಪನ ಸನ್ನಿಧಾನಕ್ಕೆ ಹೋಗುವ ನಿಜವಾದ ಮಹಿಳಾ ಭಕ್ತರಿಗೆ ಸರ್ಕಾರ ಸೂಕ್ತ ಭದ್ರತೆ ನೀಡಲಿದೆ. ದೇವಾಲಯ ಕ್ರಿಯಾವಾದಕ್ಕೆ ಜಾಗವಲ್ಲ ಎಂದು ಹೇಳಿದರು.
ಇಂದು ಇಬ್ಬರು ಮಹಿಳೆಯರು ಪ್ರವೇಶಿಸಲು ಪ್ರಯತ್ನಿಸಿದಾಗ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಪ್ರವೇಶ ಕೇಂದ್ರ ನಿಜವಾಗಿಯೂ ಸಂಘರ್ಷದ ಪ್ರದೇಶವಾಗಿ ಮಾರ್ಪಟ್ಟಿತು.
ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆ ದೇಗುಲ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಇಬ್ಬರು ಮಹಿಳಾ ಪತ್ರಕರ್ತೆಯರು ಇಂದು ದೇಗುಲ ಪ್ರವೇಶಕ್ಕೆ ಯತ್ನಿಸಿದ್ದರು. ಆಂಧ್ರ ಪ್ರದೇಶ ಮೂಲದ ಪತ್ರಕರ್ತೆ ಕವಿತಾ ಜಕ್ಕಲ್ ಮತ್ತು ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾ ಶಬರಿಮಲೆಯತ್ತ ಪ್ರಯಾಣ ಆರಂಭಿಸಿದ್ದರು. ಆದರೆ ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆಗೆ ಅವರು ಮಣಿದಿದ್ದು, ಶಬರಿಮಲೆಯಿಂದ ವಾಪಸ್ ತೆರಳಲು ನಿರ್ಧರಿಸಿದರು.
ಇಂದು ಅಪರಾಹ್ನ 46 ವರ್ಷದ ಶಾರ್ಜಾದ ಮೇರಿ ಸ್ವೀಟಿ ಕೂಡ ದೇವಾಲಯದ ಪ್ರವೇಶದವರೆಗೆ ಹೋದವರು ಹಿಂತಿರುಗಿದರು.
ನಿನ್ನೆ ದೆಹಲಿ ಮೂಲದ ಪತ್ರಕರ್ತೆ ಸುಹಾಸಿನಿ ರಾಜ್ ರನ್ನು ಕೂಡ ಮಧ್ಯದಲ್ಲಿಯೇ ತಡೆಯಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


