ಶಬರಿಮಲೆ ದೇವಾಲಯದ ಹಿಂಸಾಚಾರಕ್ಕೆ ಆರ್ ಎಸ್ ಎಸ್ ಕಾರಣ- ಯೆಚೂರಿ ಆರೋಪ
ಶಬರಿಮಲೆ ದೇವಾಲಯದ ಹಿಂಸಾಚಾರಕ್ಕೆ ಆರ್ ಎಸ್ ಎಸ್ ಕಾರಣ ಎಂದು ಸಿಪಿಐ -ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆರೋಪಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಸಂದರ್ಭದಲ್ಲಿ ಇಂತಹ ಹಿಂಸಾಚಾರ ಉಂಟಾಗಿತ್ತು ಎಂದು ಹೇಳಿದ್ದಾರೆ.

ಚೆನ್ನೈ: ಶಬರಿಮಲೆ ದೇವಾಲಯದ ಹಿಂಸಾಚಾರಕ್ಕೆ ಆರ್ ಎಸ್ ಎಸ್ ಕಾರಣ ಎಂದು ಸಿಪಿಐ -ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆರೋಪಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಸಂದರ್ಭದಲ್ಲಿ ಇಂತಹ ಹಿಂಸಾಚಾರ ಉಂಟಾಗಿತ್ತು ಎಂದು ಹೇಳಿದ್ದಾರೆ.
ಸಮಾಜದಲ್ಲಿ ಸೌಹಾರ್ದಾತೆ ಹಾಳು ಮಾಡುವ ಮೂಲಕ ವೋಟ್ ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿದೆ. ಕೇಸರಿ ಪಡೆಯ ಸ್ವಯಂ ಸೇವಕರು ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಮಾದರಿಯಲ್ಲೇ ಶಬರಿಮಲೆಗೆ ತೆರಳುತ್ತಿದ್ದ ಮಹಿಳೆಯರ ಮೇಲೆ ದೌರ್ಜನ್ಯವೆಸಲಾಗಿದೆ ಎಂದು ಅವರು ಆರೋಪಿಸಿದರು.
ಭಕ್ತಾಧಿಗಳ ಹೆಸರಿನಲ್ಲಿ ಕೆಲ ಸಮಾಜ ವಿರೋಧಿ ಶಕ್ತಿಗಳು ಶಬರಿಮಲೆ ಪ್ರದೇಶದಲ್ಲಿ ಹಿಂಸಾಚಾರ ಸೃಷ್ಟಿಸುತ್ತಿವೆ ಎಂದು ಆರೋಪಿಸಿದ್ದಾರೆ.
ಈ ಮಧ್ಯೆ ಕೇರಳದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿವೆ ಎಂದು ಕೇರಳ ರಾಜ್ಯ ಸಿಪಿಐ(ಎಂ) ಕಾರ್ಯದರ್ಶಿ ಕೊಡಿಯೆರಿ ಬಾಲಕೃಷ್ಣನ್ ದೂಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


