ಅಮೃತಸರ ದುರಂತ: ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆದೇಶ!
ರೈಲು ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.

Published On :
ಅಮೃತಸರ : ರೈಲು ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.
ಮೃತ ಕುಟುಂಬಗಳ ಸದಸ್ಯರಿಗೆ ಪರಿಹಾರ ನೀಡಲು ಜಿಲ್ಲಾಡಳಿತಕ್ಕೆ ಕೂಡಲೇ 3 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಅವರು ಆದೇಶಿಸಿದ್ದಾರೆ.
ದುರಂತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಮರಿಂದರ್ ಸಿಂಗ್ ದುರಂತ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದ್ದು, ನಾಲ್ಕು ವಾರಗಳೊಳಗೆ ವರದಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ದುರಂತದಲ್ಲಿ 59 ಜನರು ಮೃತಪಟ್ಟಿದ್ದು, 57 ಜನರು ಗಾಯಗೊಂಡಿದ್ದಾರೆ. ಆದಷ್ಟು ಬೇಗ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗುವುದು, 9 ಜನರನ್ನು ಹೊರತುಪಡಿಸಿದಂತೆ ಉಳಿದೆಲ್ಲಾ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆದೇಶPunjabordersನ್ಯಾಯಾಂಗ ತನಿಖೆAmritsar tragedyCM Captain Amarinder SinghMagisterial probe ಪಂಜಾಬ್ಅಮೃತಸರ ದುರಂತಮುಖ್ಯಮಂತ್ರಿ ಅಮರಿಂದರ್ ಸಿಂಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


