ಅಮೃತಸರ ದುರಂತ: ಕಾರ್ಯಕ್ರಮಕ್ಕೆ ಅನುಮತಿ ನೀಡಿರಲಿಲ್ಲ- ರೈಲ್ವೇ ಇಲಾಖೆ ಸ್ಪಷ್ಟನೆ
ಅಮೃತಸರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಕೇಂದ್ರ ರೈಲ್ವೇ ಇಲಾಖೆ, ಕಾರ್ಯಕ್ರಮಕ್ಕೆ ಅನುಮತಿಯನ್ನೇ ನೀಡಿರಲಿಲ್ಲ, ಆದರೂ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಪ್ರಕರಣದಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಶನಿವಾರ ಹೇಳಿದೆ...

Published On :
ನವದೆಹಲಿ: ಅಮೃತಸರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಕೇಂದ್ರ ರೈಲ್ವೇ ಇಲಾಖೆ, ಕಾರ್ಯಕ್ರಮಕ್ಕೆ ಅನುಮತಿಯನ್ನೇ ನೀಡಿರಲಿಲ್ಲ, ಆದರೂ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಪ್ರಕರಣದಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಶನಿವಾರ ಹೇಳಿದೆ.
ನಾವು ಯಾವುದನ್ನು ಮುಚ್ಚಿಟ್ಟಿಲ್ಲ. ಕಾರ್ಯಕ್ರಮಕ್ಕೆ ಅನುಮತಿಯನ್ನೇ ನೀಡಿರಲಿಲ್ಲ. ಸ್ಥಳೀಯ ಅಧಿಕಾರಿಗಳು ನಿಯಮ ಉಲ್ಲಂಘಿಸಿ ಕಾರ್ಯಕ್ರಮ ನಡೆಸಿದ್ದಾರೆ. ಹೀಗಾಗಿ ದುರ್ಘಟನೆಯ ಜವಾಬ್ದಾರಿಯನ್ನು ಸ್ಥಳೀಯ ಆಡಳಿತ ಮಂಡಳಿಯೇ ಹೊರಬೇಕೆಂದು ರೈಲ್ವೇ ಅಧಿಕಾರಿಗಳು ಹೇಳಿದ್ದಾರೆ.
ಅಷ್ಟು ದೊಡ್ಡ ಸಂಖ್ಯೆಯಲ್ಲಿ ಜನರು ಸ್ಥಳದಲ್ಲಿ ಸೇರಿದ್ದರು, ರೈಲುಗಳನ್ನೇಕೆ ನಿಲ್ಲಿಸಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ಪಟಾಕಿಗಳನ್ನು ಸಿಡಿಸಿದ್ದರಿಂದ ಸಾಕಷ್ಟು ಹೊಗೆ ತುಂಬಿತ್ತು. ಹೀಗಾಗಿ ಯಾವುದೇ ದೃಶ್ಯಗಳೂ ಕಾಣಿಸಿಲ್ಲ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಸ್ಥಳೀಯ ಆಧಿಕಾರಿಗಳು, ಇಲಾಖೆ ಪ್ರಮುಖ ಅಧಿಕಾರಿಗಳು ಧಾವಿಸಿದ್ದು, ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳನ್ನು ನೋಡಿಕೊಳ್ಳುತ್ತಿದ್ದಾರೆಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದುರಂತdeath tolltragedyಸಾವಿನ ಸಂಖ್ಯೆtrain accidentರೈಲು ಅಪಘಾತAmritsar train accidentDussehra tragedyಅಮೃತಸರ ರೈಲು ಅಪಘಾತದಸರಾ ದುರಂತ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


