ಕೇರಳ ಶಾಸನಸಭೆಯಲ್ಲಿ ಕನ್ನಡ ಕಂಪು ಪಸರಿಸಿದ್ದ ಶಾಸಕ ಪಿ.ಬಿ. ಅಬ್ದುಲ್ ರಜಾಕ್ ವಿಧಿವಶ
ಮಂಜೇಶ್ವರ ಶಾಸಕ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಲೀಡರ್ ಪಿ.ಬಿ. ಅಬ್ದುಲ್ ರಜಾಕ್ (63) ವಿಧಿವಶರಾಗಿದ್ದಾರೆ.....

Published On :
ಕಾಸರಗೊಡು: ಮಂಜೇಶ್ವರ ಶಾಸಕ ಹಾಗೂ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಲೀಡರ್ ಪಿ.ಬಿ. ಅಬ್ದುಲ್ ರಜಾಕ್ (63) ವಿಧಿವಶರಾಗಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಸುಕಿನ ಜಾಲವ 5 ಗಂಟೆಗೆ ಕೊನೆಯುಸಿರೆಳಿದ್ದಾರೆ.
ಶವವನ್ನು ಕಾಸರಗೋಡಿನ ನೈಮರ್ಮೂಲಗೆ ತೆಗೆದುಕೊಂಡು ಹೋಗಲಾಗಿದೆ, ಅಬ್ದುಲ್ ರಜಾಕ್ ಅವರು 2016ರಲ್ಲಿ ಎರಡನೇ ಬಾರಿ ಶಾಸಕರಾಗಿದ್ದರು.
ಜೂನ್ 2, 2016ರಲ್ಲಿ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಅಬ್ದುಲ್ ರಜಾಕ್ 89 ಮತಗಳಿಂದ ಅಚ್ಚರಿಯ ಗೆಲುವು ಸಾಧಿಸಿದ್ದರು.ಬಿಜೆಪಿಯ ಸುರೇಂದ್ರನ್ ಅವರನ್ನು 89 ಮತಗಳಿಂದ ಸೋಲಿಸಿದ್ದರು.
ಕೇರಳ ವಿಧಾನ ಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕನ್ನಡದ ಕಂಪನ್ನು ಸಾರಿದ್ದರು. 2011ರಲ್ಲಿ ಮುಸ್ಲಿಂ ಲೀಗ್ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


