ಶಬರಿಮಲೆಯತ್ತ ಹೆಜ್ಜೆ ಹಾಕಿದ ಮತ್ತಷ್ಟು ಮಹಿಳೆಯರು: ಹಲವೆಡೆ ನಿಷೇಧಾಜ್ಞೆ, ಭದ್ರತೆ ಹೆಚ್ಚಿಸಿದ ಅಧಿಕಾರಿಗಳು
ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಲು ಮತ್ತಷ್ಟು ಮಹಿಳೆಯರು ಪ್ರಯಾಣ ಆರಂಭಿಸಿದ್ದು, ಈ ಹಿನ್ನಲೆಯಲ್ಲಿ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಿರುವ ಅಧಿಕಾರಿಗಳು ಭದ್ರತೆಯನ್ನು ಹೆಚ್ಚಿಸಿದ್ದಾರೆಂದು ತಿಳಿದುಬಂದಿದೆ...

Published On :
ಪಂಪಾ: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಲು ಮತ್ತಷ್ಟು ಮಹಿಳೆಯರು ಪ್ರಯಾಣ ಆರಂಭಿಸಿದ್ದು, ಈ ಹಿನ್ನಲೆಯಲ್ಲಿ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಿರುವ ಅಧಿಕಾರಿಗಳು ಭದ್ರತೆಯನ್ನು ಹೆಚ್ಚಿಸಿದ್ದಾರೆಂದು ತಿಳಿದುಬಂದಿದೆ.
50 ಪುರುಷ ಭಕ್ತರ ಬೆಂಬಲದೊಂದಿಗೆ 13 ಮಂದಿ ಮಹಿಳೆಯರು ಅಯ್ಯಪ್ಪ ದೇಗುಲ ಪ್ರವೇಶಿಸಲು ಆಗಮಿಸುತ್ತಿದ್ದಾರೆಂದು ತಿಳಿದುಬಂದ ಹಿನ್ನಲೆಯಲ್ಲಿ ಕೇರಳ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆಂದು ವರದಿಗಳು ತಿಳಿಸಿವೆ.
ಶಬರಿಮಲೆ, ಇಳಾವಂಕುಲ್ ಮತ್ತು ಪಂಪಾ ಬಳಿ ಈಗಾಗಲೇ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಈ ನಿಷೇಧಾಜ್ಞೆಯನ್ನು ಸೋಮವಾರದವರೆಗೂ ಮುಂದುವರೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.
ಈ ನಡುವೆ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಕೆ.ಸುರೇಂದ್ರನ್ ಅವರು, 10-50 ವರ್ಷದೊಳಗಿನ ಮಹಿಳೆಯರು ದೇವಾಲಯದೊಳಗೆ ಪ್ರವೇಶ ಮಾಡದಂತೆ ಅಯ್ಯಪ್ಪ ಭಕ್ತರು ನಡೆಸುತ್ತಿರುವ ಪ್ರತಿಭಟನೆ ಹೀಗೆಯೇ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಈ ಹಿಂದ ಹೇಳಿಕೆ ನೀಡಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿಯವರು, ಶಬರಿಮಲೆ ಹಿಂಸಾಚಾರವನ್ನು ಅಯೋಧ್ಯೆ ಬಾಬ್ರಿ ಮಸೀದಿ ಧ್ವಂಸದ ವೇಳೆ ಸಂಭವಿಸಿದ್ದ ಹಿಂಸಾಚಾರಕ್ಕೆ ಹೋಲಿಕೆ ಮಾಡಿದ್ದರು. ಯೆಚೂರಿಯವರ ಹೇಳಿಕೆ ಇದೀಗ ಭಾರೀ ಚರ್ಚೆ ಹಾಗೂ ವಾಗ್ಸಮರಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


