ದೇಶ

ಅಮೃತಸರ ದುರಂತ: ರೈಲು ಚಾಲಕನ ವಿರುದ್ಧ ಕ್ರಮಕ್ಕೆ ಸ್ಥಳೀಯರ ಒತ್ತಾಯ

ಘನ ಘೋರ ರೈಲು ದುರಂತ ಸಂಭವಿಸಿದ ಜೊಡಾ ಪಠಾಕ್ ರೈಲು ಹಳಿ ಮೇಲೆ ಕುಳಿತು ಇಂದು ಕೂಡಾ ಸ್ಥಳೀಯರು ಪ್ರತಿಭಟನೆ ಮುಂದುವರೆಸಿದ್ದು, ರೈಲು ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಅಮೃತಸರ ದುರಂತ: ರೈಲು ಚಾಲಕನ ವಿರುದ್ಧ ಕ್ರಮಕ್ಕೆ  ಸ್ಥಳೀಯರ ಒತ್ತಾಯ
ದುರಂತ ಸಂಭವಿಸಿದ ರೈಲು ಹಳಿ ಮೇಲೆ ನಿಂತು ಸ್ಥಳೀಯರ ಪ್ರತಿಭಟನೆ
Published On :

ಅಮೃತಸರ: ಘನ ಘೋರ ರೈಲು ದುರಂತ ಸಂಭವಿಸಿದ ಜೊಡಾ ಪಠಾಕ್ ರೈಲು ಹಳಿ ಮೇಲೆ ಕುಳಿತು  ಇಂದು ಕೂಡಾ ಸ್ಥಳೀಯರು ಪ್ರತಿಭಟನೆ  ಮುಂದುವರೆಸಿದ್ದು, ರೈಲು ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರು,  ಚಾಲಕನ ಅಜಾಗರೂಕತೆಯಿಂದಾಗಿಯೇ ದುರಂತ ಸಂಭವಿಸಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು  ಆಗ್ರಹಿಸಿದ್ದಾರೆ.

ರೈಲ್ವೆ ಹಳಿ ಮೇಲೆ ಕುಳಿತು ಪ್ರತಿಭಟಿಸದಂತೆ ಪೊಲೀಸರು ಸ್ಥಳೀಯರಿಗೆ ಹೇಳುತ್ತಿದ್ದಾರೆ. ಪ್ರತಿಭಟನೆಗೆ ಬರುತ್ತಿರುವವರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಸಂಜೆ ವೇಳೆಗೆ ಸಹಜ ಪರಿಸ್ಥಿತಿ ಮರುಕಳಿಸಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಪರಿಸ್ಥಿತಿ ನಿರ್ವಹಣೆಗಾಗಿ ಕಮಾಂಡೋ ಸೇರಿದಂತೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕ್ಷಿಪ್ರ ಕಾರ್ಯ ಪಡೆ ಕೂಡಾ ಪ್ರತಿಭಟನಾ ಸ್ಥಳದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.