ಎನ್ಆರ್ ಸಿ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ವಕೀಲ ಆತ್ಮಹತ್ಯೆ
ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಪಟ್ಟಿಯಲ್ಲಿ ತಮ್ಮ ಹೆಸರಿಲ್ಲ ಎಂಬ ಕಾರಣಕ್ಕೆ ನೊಂದ ನಿವೃತ್ತ...

Published On :
ಗುವಾಹತಿ: ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಪಟ್ಟಿಯಲ್ಲಿ ತಮ್ಮ ಹೆಸರಿಲ್ಲ ಎಂಬ ಕಾರಣಕ್ಕೆ ನೊಂದ ನಿವೃತ್ತ ಶಾಲಾ ಶಿಕ್ಷಕ ಹಾಗೂ ವಕೀಲರಾಗಿದ್ದ ನಿರೋದ್ ಕುಮಾರ್ ದಾಸ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.
ಗುವಾಹತಿಯಿಂದ 100 ಕಿ.ಮೀ. ದೂರದಲ್ಲಿರುವ ಮಂಗಲ್ಡೊಯ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಜುಲೈ 30ರಂದು ಎನ್ ಆರ್ ಸಿ ಕರಡು ಪ್ರಕಟಗೊಂಡ ನಂತರ ನಡೆದ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.
ನಿವೃತ್ತಿ ನಂತರ ವಕೀಲ ವೃತ್ತಿ ಮಾಡುತ್ತಿದ್ದ ನಿರೋದ್ ಕುಮಾರ್ ಅವರು ಭಾನುವಾರ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧೀಕ್ಷಕ ಶ್ರೀಜಿತ್ ಅವರು ತಿಳಿಸಿದ್ದಾರೆ.
ಆತ್ಮಹತ್ಯೆಗೂ ಮುನ್ನ 74 ವರ್ಷದ ನಿರೋಧ್ ಕುಮಾರ್ ಅವರು ಪತ್ರವೊಂದನ್ನು ಬರೆದಿದ್ದು, ಎನ್ ಆರ್ ಸಿ ಪ್ರಕ್ರಿಯೆ ನಂತರ ತಾನು ವಿದೇಶಿ ಎಂದು ಗುರುತಿಸಲ್ಪಡುವ ಅವಮಾನದಿಂದ ಕಪ್ಪಿಸಿಕೊಳ್ಳಲು ಈ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿರುವುದಾಗಿ ಬರೆದಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


