ತೆಲಂಗಾಣ: ಮೊಬೈಲ್ ಗಾಗಿ ವಿದ್ಯಾರ್ಥಿಗಳ ನಡುವೆ ಜಗಳ, ಕೊಲೆಯಲ್ಲಿ ಅಂತ್ಯ
ಮೊಬೈಲ್ ವಿಚಾರಕ್ಕೆ ಸಂಬಂಧಿಸಿದಂತೆ 10ನೇ ತರಗತಿ ವಿದ್ಯಾರ್ಥಿಯೊಬ್ಬ 4ನೇ ತರಗತಿ ವಿದ್ಯಾರ್ಥಿಯನ್ನು ಕೊಲೆ....

Published On :
ಕಮ್ಮಮ್: ಮೊಬೈಲ್ ವಿಚಾರಕ್ಕೆ ಸಂಬಂಧಿಸಿದಂತೆ 10ನೇ ತರಗತಿ ವಿದ್ಯಾರ್ಥಿಯೊಬ್ಬ 4ನೇ ತರಗತಿ ವಿದ್ಯಾರ್ಥಿಯನ್ನು ಕೊಲೆ ಮಾಡಿದ ಆಘಾತಕಾರಿ ಘಟನೆ ತೆಲಂಗಾಣದ ಕಮ್ಮಮ್ ನ ಬುಡಕಟ್ಟು ಕಲ್ಯಾಣ ವಸತಿ ನಿಲಯದಲ್ಲಿ ನಡೆದಿದೆ.
ಇಬ್ಬರು ವಿದ್ಯಾರ್ಥಿಗಳು ಮೊಬೈಲ್ ಗಾಗಿ ಜಗಳ ಮಾಡಿಕೊಂಡಿದ್ದು, ಜಗಳ ಓರ್ವ ವಿದ್ಯಾರ್ಥಿಯ ಸಾವಿನಲ್ಲಿ ಅಂತ್ಯವಾಗಿದೆ. ಹಾಸ್ಟೆಲ್ ಸಿಬ್ಬಂದಿ ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸದಿರುವುದೇ ಘಟನೆಗ ಕಾರಣ ಎನ್ನಲಾಗಿದೆ.
ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಕೊಲೆಯಾದ 4ನೇ ತರಗತಿ ವಿದ್ಯಾರ್ಥಿಯ ತಲೆ, ಎದೆ ಮತ್ತು ಎಡಗೈ ಮೇಲೆ ಗಾಯಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಬಾಲಕ ಮೊಬೈಲ್ ಫೋನ್ ನೀಡಲು ನಿರಾಕರಿಸಿದ್ದರಿಂದ ಆಕ್ರೋಶಗೊಂಡ 10ನೇ ತರಗತಿ ವಿದ್ಯಾರ್ಥಿ ಟ್ರಂಕ್ ಬಾಕ್ಸ್ ನಿಂದ ತಲೆಗೆ ಹೊಡೆದಿದ್ದಾನೆ. ಇದರಿಂದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿ ಬಾಲಕ ಇತರೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದನು. ಹಾಗ ಆತನ ಪೋಷಕರನ್ನು ಕರೆದು ಎಚ್ಚರಿಕೆ ನೀಡಲಾಗಿತ್ತು ಎಂದು ಹಾಸ್ಟೆಲ್ ವಿದ್ಯಾರ್ಥಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


