'ಬಿಜೆಪಿಯವರಿಗೆ ನಾನೇ ಐಟಂ ಗರ್ಲ್': ಆಜಂ ಖಾನ್ ವ್ಯಂಗ್ಯ
ಆಡಳಿತರೂಢ ಬಿಜೆಪಿ ಚುನಾವಣೆ ಬಂದಾಗಲೆಲ್ಲ ನನ್ನ ಹೆಸರು ಬಳಸಿಕೊಳ್ಳುತ್ತಿದ್ದು, ಅವರಿಗೆ ಚುನಾವಣೆ ಎದುರಿಸಲು...

Published On :
ಲಖನೌ: ಆಡಳಿತರೂಢ ಬಿಜೆಪಿ ಚುನಾವಣೆ ಬಂದಾಗಲೆಲ್ಲ ನನ್ನ ಹೆಸರು ಬಳಸಿಕೊಳ್ಳುತ್ತಿದ್ದು, ಅವರಿಗೆ ಚುನಾವಣೆ ಎದುರಿಸಲು ನಾನು ಐಟಂ ಗರ್ಲ್ ಆಗಿಬಿಟ್ಟಿದ್ದೇನೆ ಎಂದು ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಬುಧವಾರ ಲೇವಡಿ ಮಾಡಿದ್ದಾರೆ.
ಕಳೆದ ಒಂದು ವಾರದಲ್ಲಿ ತಮ್ಮ ವಿರುದ್ಧ ಎರಡು ಎಫ್ಐಆರ್ ದಾಖಲಿಸಿದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಆಜಂ ಖಾನ್, ಬಿಜೆಪಿಯವರಿಗೆ ನಾನೇ ಐಟಂ ಗರ್ಲ್ ಆಗಿದ್ದು, ನನ್ನನ್ನು ಮುಂದಿಟ್ಟುಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದರು.
ಎರಡು ವರ್ಷದ ಹಿಂದೆ ನಾನು ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದೆ ಎಂದು ಈಗ ಮಾನನಷ್ಟ ಮೊಕದ್ದಮೆ ಹಾಕಿ ಎಫ್ಐಆರ್ ದಾಖಲಿಸಿರುವುದಾಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮುಸ್ಲಿಮರ ಮತ ಸೆಳೆಯಲು ನನ್ನ ಹೆಸರನ್ನು ಬಳಸಿಕೊಳ್ಳುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಹೀಗೆ ಮಾಡಿದೆ ಮತ್ತು ಮುಂದಿನ ಲೋಕಸಭೆ ಚುನಾವಣೆಯಲ್ಲೂ ನನ್ನ ಹೆಸರಿನಲ್ಲಿ ಚುನಾವಣೆ ಎದುರಿಸಲಿದೆ ಎಂದು ಆರೋಪಿಸಿದ್ದಾರೆ.
ಇದಕ್ಕು ಮುನ್ನ ಕಳೆದ ವರ್ಷ ಅಕ್ಟೋಬರ್ನಲ್ಲಿ ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ತಮ್ಮ ಮಗಳ ಮೇಲೆ ಆ್ಯಸಿಡ್ ಹಾಕುವುದಾಗಿ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿ ಆಜಂ ಖಾನ್ ವಿರುದ್ಧ ಗೋಮ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆಗಲೂ ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


