ಕೋಲ್ಕತಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 2 ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ
ಪಶ್ಚಿಮ ಬಂಗಾಳದ ಸಾಂತ್ರಗಚಿ ರೈಲು ನಿಲ್ದಾಣದ ಪಾದಚಾರಿ ಮೇಲ್ಸೇತುವೆ ಬಳಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ, 12ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ...

Published On :
ಕೋಲ್ಕತಾ: ಪಶ್ಚಿಮ ಬಂಗಾಳದ ಸಾಂತ್ರಗಚಿ ರೈಲು ನಿಲ್ದಾಣದ ಪಾದಚಾರಿ ಮೇಲ್ಸೇತುವೆ ಬಳಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ, 12ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ.
ನಿನ್ನೆ ಸಂಜೆ 6.30ರ ಸುಮಾರಿಗೆ ಒಂದು ಎಕ್ಸ್ ಪ್ರೆಸ್ ರೈಲು ಮತ್ತು ಎರಡು ಸ್ಥಳೀಯ ರೈಲುಗಳು ಏಕಕಾಲಕ್ಕೆ ನಿಲ್ದಾಣಕ್ಕೆ ಆಗಮಿಸಿವೆ. ಈ ವೇಳೆ ರೈಲನ್ನು ಹತ್ತಲು ಏಕಕಾಲಕ್ಕೆ ಜನರು ಧಾವಿಸಿದ್ದರಿಂದಾಗಿ ಪಾದಚಾರಿ ಮೇಲ್ಸೇತುವೆ ಬಳಿ ಜನದಟ್ಟಣೆ ಉಂಟಾಗಿದೆ. ಪರಿಣಾಮ ಕಾಲ್ತುಳಿತ ಸಂಭವಿಸಿದೆ ಎಂದು ರೈಲ್ವೇ ವಕ್ತಾರ ಸಂಜಯ್ ಘೋಷ್ ಅವರು ಹೇಳಿದ್ದಾರೆ.
ನಾಗರ್ ಕೊಯಿಲ್-ಶಾಲಿಮಾರ್ ಎಕ್ಸ್ ಪ್ರೆಸ್ ಮತ್ತು ಎರಡು ಸ್ಥಳೀಯ ರೈಲುಗಳು ಏಕಕಾಲಕ್ಕೆ ನಿಲ್ದಾಣಕ್ಕೆ ಬಂದಿವೆ. ಶಾಲಿಮಾರ್-ವಿಶಾಖಪಟ್ಟಣ ಎಕ್ಸ್ ಪ್ರೆಸ್ ಹಾಗೂ ಸಾಂತ್ರಗಚಿ-ಚೆನ್ನೈ ಎಕ್ಸ್ ಪ್ರೆಸ್ ಗಳು ಇನ್ನೇನು ನಿಲ್ದಾಣಕ್ಕೆ ಆಗಮಿಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಮೇಲ್ಸೇತುವೆ ಬಳಿ ಜನದಟ್ಟಣೆ ಹೆಚ್ಚಾಗಿತ್ತು.
ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮೃತರ ಕುಟುಂಬಕ್ಕೆ ರೂ.5 ಲಕ್ಷ ಹಾಗೂ ಗಾಯಾಳುಗಳಿಗೆ ರೂ.1 ಲಕ್ಷ ಪರಿಹಾರ ಘೋಷಿಸಿದ್ದಾರೆ.
ರೈಲ್ವೇ ಇಲಾಖೆ ಬಹಳ ಎಚ್ಚರ ವಹಿಸಬೇಕಿತ್ತು. ಪ್ರಕರಣ ಸಂಬಂಧ ರಾಜ್ಯ ಸರ್ಕಾರ ತನಿಖೆ ನಡೆಸಲಿದೆ. ಹಬ್ಬಗಳ ಸಂದರ್ಭದಲ್ಲಿಯೇ ದುರಂತಗಳು ಸಂಭವಿಸುತ್ತಿವೆ. ರೈಲ್ವೇ ಇಲಾಖೆ ದೇಶದ ಜೀವವಿದ್ದಂತೆ. ಪ್ರಯಾಣಿಕರ ಸುರಕ್ಷತೆಯನ್ನು ಇಲಾಖೆ ಸೂಕ್ತ ರೀತಿಯಲ್ಲಿ ನೋಡಿಕೊಳ್ಳಬೇಕೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


