ದೇಶ

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ ನಂ.1 ಆರೋಪಿ: ಇಡಿ ಚಾರ್ಜ್ ಶೀಟ್ ದಾಖಲು

ಏರ್ಸೆಲ್ ಮಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಇಂದು (ಗುರುವಾರ) ಆರೋಪಪಟ್ಟಿಯನ್ನು ದಾಖಲಿಸಿದೆ.

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ ನಂ.1 ಆರೋಪಿ: ಇಡಿ ಚಾರ್ಜ್ ಶೀಟ್ ದಾಖಲು
ಪಿ. ಚಿದಂಬರಂ
Published On :
ನವದೆಹಲಿ: ಏರ್ಸೆಲ್ ಮಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಇಂದು (ಗುರುವಾರ) ಆರೋಪಪಟ್ಟಿಯನ್ನು ದಾಖಲಿಸಿದೆ.
ಪ್ರಕರಣದಲ್ಲಿ ಒಟ್ಟು ಒಂಬತ್ತು ಆರೋಪಿಗಳನ್ನು ಹೆಸರಿಸಿರುವ ಇಡಿ ಚಿದಂಬರಂ ಅವರನ್ನು ನಂಬರ್ 1 ಆರೋಪಿ ಎಂದು ಕರೆದಿದೆ.
ಇನ್ನು ಎಸ್. ಭಾಸ್ಕರಮಾನ್, ನಾಲ್ಕು ಮ್ಯಾಕ್ಸಿಸ್ ಕಂಪೆನಿಗಳು ಸಿಬಿಐ ವಿಶೇಷ ನ್ಯಾಯಾಧೀಶ ಒ.ಪಿ. ಸೈನಿ ಸೇರಿ ಒಂಬತ್ತು ಆರೋಪಿಗಳನ್ನು ಇಲ್ಲಿ ಹೆಸರಿಸಲಾಗಿದೆ.
ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಇಡಿ ಸಲ್ಲಿಸಿದ ಎರಡನೇ ಆರೋಪಪಟ್ಟಿ ಇದಾಗಿದೆ. ಚಿದಂಬರಂನ ಅವರ ಎಫ್ಐಪಿಬಿ ಅಕ್ರಮ ಅನುಮೋದನೆ ಕುರಿತಂತೆ ಇದರಲ್ಲಿ ವಿವರಗಳಿದೆ.
ಇದಕ್ಕೆ ಮುನ್ನ ಸಲ್ಲಿಕೆಯಾದ ಆರೋಪಪಟ್ಟಿಯಲ್ಲಿ ಮಾಜಿ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಹಾಗೂ ಅವರ ಸೋದರ ಕಲಾನಿಧಿ ಮಾರನ್ ಹಾಗೂ ಇತರರ ಹೆಸರು ನಮೂದಾಗಿತ್ತು.
ಚಿದಂಬರಂ 2006 ರ ಮಾರ್ಚ್ ನಲ್ಲಿ  ಎಫ್ಐಪಿಬಿ ಅನುಮೋದನೆಯನ್ನು ನೀಡಿದ್ದಾರೆ ಮಾರಿಶಸ್ ಮೂಲದ ಗ್ಲೋಬಲ್ ಕಮ್ಯುನಿಕೇಷನ್ ಸರ್ವಿಸಸ್ ಹೋಲ್ಡಿಂಗ್ಸ್ ಲಿಮಿಟೆಡ್ನ ಅಂಗಸಂಸ್ಥೆ ಮ್ಯಾಕ್ಸಿಸ್ ಗೆ ಅನುಮೋದನೆ ದೊರಕಿದೆ ಎಂದು ಇಡಿ ಆರೋಪಿಸಿದೆ.
ಸಿಬಿಐ ಆರೋಪಪಟ್ಟಿಯಲ್ಲಿ ಹೆಸರಿಸಲಾದ ಮಾರನ್ ಸಹೋದರರು ಮತ್ತು ಇತರ ಆರೋಪಿಗಳನ್ನು ವಿಶೇಷ ನ್ಯಾಯಾಲಯವು ಬಿಡುಗಡೆ ಮಾಡಿದೆ. ಏಜನ್ಸಿಯು ಇವರ ವಿರುದ್ಧ ಯಾವ ಸೂಕ್ತ ದಾಖಲೆ ಒದಗಿಸಲು ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿತ್ತು.
ಇದೇ ವೇಳೆ ಸಿಬಿಐ ಮತ್ತು ಇಡಿ ಆರೋಪಗಳನ್ನು ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ನಿರಾಕರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.