ಸಿಬಿಐ ಒಳಜಗಳ: 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಲು ಸಿವಿಸಿಗೆ ಸುಪ್ರೀಂ ಕೋರ್ಟ್ ಸೂಚನೆ
ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಅವರ ಮೇಲಿನ ಆರೋಪಗಳ ಕುರಿತು 10 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸುವಂತೆ...

Published On :
ನವದೆಹಲಿ: ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಅವರ ಮೇಲಿನ ಆರೋಪಗಳ ಕುರಿತು 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸುವಂತೆ ಸಿವಿಸಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.
ಕೇಂದ್ರ ಸರ್ಕಾರದ ರಾತ್ರೋರಾತ್ರಿ ಕಡ್ಡಾಯ ರಜೆ ಪ್ರಶ್ನಿಸಿ ಅಲೋಕ್ ವರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿ ಎಸ್.ಕೆ.ಕೌಲ್ ಮತ್ತು ಕೆ.ಎಂ. ಜೋಸೆಫ್ ಅವರಿದ್ದ ಪೀಠ, 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸಿವಿಸಿಗೆ ಸೂಚನೆ ನೀಡಿದೆ.
ಅಲೋಕ್ ವರ್ಮಾ ಪರವಾಗಿ ಹಿರಿಯ ವಕೀಲ ಫಾಲಿ ನಾರಿಮನ್ ಹಾಗೂ ಸಂಜಯ್ ಹೆಗ್ಡೆಯವರು ವಾದ ಮಂಡಿಸಿದ್ದರು. ಕೇಂದ್ರ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರು ವಾದ ಮಂಡಿಸಿದರು.
ವಿಚಾರಣೆ ವೇಳೆ ವಾದ ಮಂಡಿಸಿದ ಸಿವಿಸಿ ಪರ ವಕೀಲರು ತನಿಖೆಗೆ ಹೆಚ್ಚಿನ ಸಮಯ ನೀಡುವಂತೆ ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡರು. ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಈ ವಿಚಾರದಲ್ಲಿ ಹೆಚ್ಚಿನ ಸಮಯ ನೀಡಲು ಸಾಧ್ಯವಿಲ್ಲ. ದೇಶದ ಹಿತದೃಷ್ಟಿಯಿಂದ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಅಲೋಕ್ ವರ್ಮಾ ವಿರುದ್ಧ ಕೇಳಿ ಬಂದಿರುವ ಆರೋಪ ಸಂಬಂಧ 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿತು.
ಅಲ್ಲದೆ, ಸಿಬಿಐ ಹಂಗಾಮಿ ನಿರ್ದೇಶಕ ನಾಗೇಶ್ವರ್ ರಾವ್ ಅವರು ಯಾವುದೇ ನಿರ್ಧಾರಗಳನ್ನು ಕೈಗೊಳ್ಳದಂತೆ ತಿಳಿಸಿದ ನ್ಯಾಯಾಲಯ, ಕೇವಲ ದೈನಂದಿನ ಕಾರ್ಯ ನೋಡಿಕೊಳ್ಳಬಹುದು ಎಂದು ಹೇಳಿದೆ.
ಪ್ರಕರಣ ಸಂಬಂಧ ಕೇಂದ್ರ ಹಾಗೂ ಸಿವಿಸಿಗೆ ನೋಟಿಸ್ ಜಾರಿ ಮಾಡಿರುವ ನ್ಯಾಯಾಲಯ, ಸಿಬಿಐ ಹಂಗಾಮಿ ನಿರ್ದೇಶಕ ರಾವ್ ಅಧಿಕಾರ ವಹಿಸಿಕೊಂಡ ಬಳಿಕ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಮುಚ್ಚಿದ ಲಕೋಟೆಯಲ್ಲಿ ತಿಳಿಸುವಂತೆ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


