ಲೈಂಗಿಕ ಕಿರುಕುಳ ಆರೋಪ: ಎಸ್ಎಲ್ಎಸ್ ನಿಂದ ಇಬ್ಬರು ವಿದ್ಯಾರ್ಥಿನಿಯರು ಅಮಾನತು
ಪ್ರಾಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು...

Published On :
ಹೈದರಾಬಾದ್: ಪ್ರಾಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ಇಬ್ಬರು ವಿದ್ಯಾರ್ಥಿನಿಯರನ್ನು ಸಿಂಬಿಯಾಸಿಸ್ ಲಾ ಸ್ಕೂಲ್(ಎಸ್ಎಲ್ಎಸ್)ನಿಂದ ಮೌಖಿಕವಾಗಿ ಅಮಾನತುಗೊಳಿಸಲಾಗಿದೆ.
ಟಿವಿ ಮಾಧ್ಯಮದಲ್ಲಿ ಸಂಸ್ಥೆಯ ಮಾನಹಾನಿ ಮಾಡಿದ ಮತ್ತು ಪ್ರಾಧ್ಯಾಪಕರ ಗೌರವಕ್ಕೆ ಧಕ್ಕೆತಂದ ಹಿನ್ನಲೆಯಲ್ಲಿ ಇಬ್ಬರು ಬಿಎ ಎಲ್ಎಲ್ ಬಿ ವಿದ್ಯಾರ್ಥಿನಿಯರಿಗೆ ಶುಕ್ರವಾರ ಸಂಜೆಯೊಳಗೆ ಹಾಸ್ಟೆಲ್ ತೊರೆಯುವಂತೆ ಸೂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಈ ಕುರಿತು ಯಾವುದೇ ಲಿಖಿತ ಆದೇಶ ನೀಡಿಲ್ಲ.
ಫೇಸ್ ಬುಕ್ ಪೋಸ್ಟ್ ತೆಗೆದು ಹಾಕಬೇಕು ಮತ್ತು ಬೇಷರತ್ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಲಾ ಸ್ಕೂಲ್ ನಿಂದಲೇ ಅಮಾನತುಗೊಳಿಸುವುದಾಗಿ ಡೀನ್ ಶಶಿಕಲಾ ಗುರ್ಪೂರ್ ಅವರು ತಮಗೆ ಬೆದರಿಕೆ ಹಾಕಿದ್ದಾರೆ ಎಂದು ಲೈಂಗಿಕ ಕಿರುಕುಳ ಆರೋಪ ಮಾಡಿದ ವಿದ್ಯಾರ್ಥಿನಿಯರಲ್ಲಿ ಒಬ್ಬರಾದ ಅಪೂರ್ವ ವೈ.ಕೆ. ಹೇಳಿದ್ದಾರೆ. ಅಲ್ಲದೆ ತಮ್ಮ ಫೇಸ್ ಬುಕ್ ಪೋಸ್ಟ್ ಅನ್ನು ಲೈಕ್ ಮಾಡಿದ ಇತರೆ ವಿದ್ಯಾರ್ಥಿನಿಯರನ್ನು ಕರೆಸಿಕೊಂಡು ಅಮಾನತುಗೊಳಿಸುವ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಲು ಕಾಲೇಜ್ ಆಡಳಿತ ಮಂಡಳಿ ಸಿಬ್ಬಂದಿ ನಿರಾಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಲೈಂಗಿಕ ದೌರ್ಜನ್ಯSymbiosis Law Schoolsuspends two studentssex abuseಎಸ್ ಎಲ್ ಎಸ್ಇಬ್ಬರು ವಿದ್ಯಾರ್ಥಿನಿಯರು ಅಮಾನತು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


