ತೆಲಂಗಾಣದಲ್ಲಿ ಟಿಆರ್ ಎಸ್ ಗೆ ಭಾರಿ ಹಿನ್ನಡೆ: ಕಾಂಗ್ರೆಸ್ ಸೇರಿದ ಇಬ್ಬರು ಪ್ರಮುಖ ನಾಯಕರು!
ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್ ಎಸ್ ಗೆ ಭಾರಿ ಹಿನ್ನಡೆಯುಂಟಾಗಿದ್ದು, ಪಕ್ಷದ ಇಬ್ಬರು ಪ್ರಮುಖ ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

Published On :
ಹೈದರಾಬಾದ್: ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್ ಎಸ್ ಗೆ ಭಾರಿ ಹಿನ್ನಡೆಯುಂಟಾಗಿದ್ದು, ಪಕ್ಷದ ಇಬ್ಬರು ಪ್ರಮುಖ ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಡಿ.07 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹಂತದಲ್ಲಿ ಇಬ್ಬರು ಪ್ರಮುಖ ನಾಯಕರಾದ ಎಸ್ ರಾಮುಲು ನಾಯ್ಕ್ ಹಾಗೂ ಟಿಎಸ್ ಆರ್ ಡಿಸಿ ಅಧ್ಯಕ್ಷ ಟಿ ನರಸಾ ರೆಡ್ಡಿ ಇಬ್ಬರೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಈ ಇಬ್ಬರೂ ನಾಯಕರನ್ನ ಟಿಆರ್ ಎಸ್ ಕಳೆದ ವಾರ ಪಕ್ಷದಿಂದ ಅಮಾನತುಗೊಳಿಸಿತ್ತು.
ಇದೇ ವೇಳೆ ಟಿಆರ್ ಎಸ್ ನ ಮತ್ತೋರ್ವ ನಾಯಕ ರಾಜ್ಯಸಭಾ ಸದಸ್ಯ ಡಿ ಶ್ರೀನಿವಾಸ್ ಸಹ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಪಕ್ಷ ಸೇರುವುದಕ್ಕೆ ಉತ್ಸಾಹ ತೋರಿದ್ದಾರೆ. 1969 ರಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಶ್ರೀನಿವಾಸ್ 2015 ರಲ್ಲಿ ಟಿಆರ್ ಎಸ್ ಸೇರ್ಪಡೆಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


