ಇ.ಡಿ ಮುಖ್ಯಸ್ಥರಾಗಿ ಐಆರ್ ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ನೇಮಕ
ಐಆರ್ ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ಜಾರಿ ನಿರ್ದೇಶನಾಲಯದ ಮುಖ್ಯಸ್ಥರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ...

Published On :
ನವದೆಹಲಿ: ಐಆರ್ ಎಸ್ ಅಧಿಕಾರಿ ಸಂಜಯ್ ಕುಮಾರ್ ಮಿಶ್ರಾ ಜಾರಿ ನಿರ್ದೇಶನಾಲಯದ ಮುಖ್ಯಸ್ಥರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ,
ಸಂಜಯ್ ಮಿಶ್ರಾ ಅವರು 1984ರ ಬ್ಯಾಚ್ನ ಐಆರ್ಎಸ್ ಅಧಿಕಾರಿಯಾಗಿದ್ದಾರೆ., ಏಜೆನ್ಸಿಯ ಪ್ರಧಾನ ವಿಷೇಷ ನಿರ್ದೇಶಕರಾಗಿ ನೇಮಕವಾಗಿದ್ದರು, ಸದ್ಯ ಮೂರು ತಿಂಗಳ ಅವಧಿಗೆ ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ಹೆಚ್ಚುವರಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ,
ಕರ್ನಲ್ ಸಿಂಗ್ ಅವರಿಂದ ಮಿಶ್ರಾ ಅಧಿಕಾರ ವಹಿಸಿಕೊಳ್ಳಲಿದ್ದಾರೆ, ಭಾನುವಾರ ಕರ್ನಲ್ ಸಿಂಗ್ ಅಧಿಕಾರ ಅಂತ್ಯಗೊಳ್ಳಲಿದೆ.ಸದ್ಯ ಮಿಶ್ರಾ ಆದಾಯ ತೆರಿಗೆ ಇಲಾಖೆ ಯ ಆಯುಕ್ತರಾಗಿದ್ದಾರೆ, ಅವರ ಸಾಮರ್ಥ್ಯ ಗಮನಿಸಿ ಸರ್ಕಾರ ಅವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Enforcement Directorateಜಾರಿ ನಿರ್ದೇಶನಾಲಯappointedನೇಮಕಾತಿSanjay Kumar MishraIRS Officerಸಂಜಯ್ ಕುಮಾರ್ ಮಿಶ್ರಾಐರ್ ಎಸ್ ಅಧಿಕಾರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


