ದೇಶ

ಶ್ರೀಲಂಕಾ ರಾಜಕೀಯ ಬಿಕ್ಕಟ್ಟಿನ್ನು ಗಮನಿಸುತ್ತಿದ್ದೇವೆ, ಲಂಕಾ ಅಭಿವೃದ್ಧಿಗೆ ನೆರವು ಮುಂದುವರಿಕೆ: ವಿದೇಶಾಂಗ ಇಲಾಖೆ

ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಭಾರತ ಲಂಕಾ ಅಭಿವೃದ್ಧಿಗೆ ನೆರವು ನೀಡುವುದನ್ನು ಮುಂದುವರೆಸುವುದಾಗಿ ಭಾರತ ಹೇಳಿದೆ.

ಶ್ರೀಲಂಕಾ ರಾಜಕೀಯ ಬಿಕ್ಕಟ್ಟಿನ್ನು ಗಮನಿಸುತ್ತಿದ್ದೇವೆ, ಲಂಕಾ ಅಭಿವೃದ್ಧಿಗೆ ನೆರವು ಮುಂದುವರಿಕೆ: ವಿದೇಶಾಂಗ ಇಲಾಖೆ
Centre monitoring situation; will continue to provide developmental aid: MEA on Sri Lanka crisis
Published On :
ಕೊಲೊಂಬೋ: ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಭಾರತ ಲಂಕಾ ಅಭಿವೃದ್ಧಿಗೆ ನೆರವು ನೀಡುವುದನ್ನು ಮುಂದುವರೆಸುವುದಾಗಿ ಭಾರತ ಹೇಳಿದೆ.
ಲಂಕಾದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟನ್ನು ಗಮನಿಸುತ್ತಿದ್ದೇವೆ, ಅಲ್ಲಿನ ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ಪ್ರಕ್ರಿಯೆಗಳನ್ನು ಗೌರವಿಸಲಾಗುತ್ತದೆ ಎಂಬ ವಿಶ್ವಾಸವಿರುವುದಾಗಿ ಭಾರತದ ವಿದೇಶಾಂಗ ಇಲಾಖೆ ಹೇಳಿದೆ. ನಮ್ಮ ನೆರೆಯ ಮಿತ್ರ ರಾಷ್ಟ್ರಕ್ಕೆ ನಾವು ಅಗತ್ಯವಿರುವ ಅಭಿವೃದ್ಧಿ ನೆರವನ್ನು ಮುಂದುವರೆಸುತ್ತೇವೆ ಎಂದು ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾದ ಹಿನ್ನೆಲೆಯಲ್ಲಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಸಂಸತ್ ತುರ್ತು ಕಲಾಪವನ್ನು ನವೆಂಬರ್​ 16ರ ವರೆಗೆ ಅಮಾನತುಗೊಳಿಸಿ ಆದೇಶ ನೀಡಿದ್ದರು. ಈ ಆದೇಶ ಪ್ರಕಟಿಸಿದ ಬೆನ್ನಲ್ಲೇ ಭಾರತೀಯ ವಿದೇಶಾಂಗ ಇಲಾಖೆ ಸಹ ಪ್ರತಿಕ್ರಿಯೆ ನೀಡಿದ್ದು, ಶ್ರೀಲಂಕಾ ರಾಜಕೀಯ ಬಿಕ್ಕಟ್ಟಿನ್ನು ಗಮನಿಸುತ್ತಿದ್ದೇವೆ, ಲಂಕಾ ಅಭಿವೃದ್ಧಿಗೆ ನೆರವು ಮುಂದುವರಿಕೆ ಮಾಡಲಾಗುತ್ತದೆ ಎಂದು ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.