ಪ್ರಧಾನಿ ಮೋದಿ ' ಡೆಂಗ್ಯೂ ಸೊಳ್ಳೆ' ಎಂದು ಕರೆದ ಕಾಂಗ್ರೆಸ್ ಶಾಸಕಿ !
ಮೋದಿ ಹೆಸರಿನ ಡೆಂಗ್ಯೂ ಸೊಳ್ಳೆಯ ಹೊಸ ತಳಿ ಜನರಲ್ಲಿ ಕಾಯಿಲೆಗೆ ಕಾರಣವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಶಾಸಕಿ ಪ್ರಣಿತಿ ಶಿಂಧೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸೊಲ್ಲಾಪುರ: ಮೋದಿ ಹೆಸರಿನ ಡೆಂಗ್ಯೂ ಸೊಳ್ಳೆಯ ಹೊಸ ತಳಿ ಜನರಲ್ಲಿ ಕಾಯಿಲೆಗೆ ಕಾರಣವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಶಾಸಕಿ ಪ್ರಣಿತಿ ಶಿಂಧೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಮ್ಮ ದೇಶದಲ್ಲಿ ಹೊಸ ಡೆಂಗ್ಯೂ ಸೊಳ್ಳೆ ಇದೆ. ಅದರ ಹೆಸರು ಮೋದಿ ಬಾಬಾ. ಸಹೋದರ, ಸಹೋದರಿಯರೇ ಹಣದುಬ್ಬರನ್ನು ನಿಯಂತ್ರಿಸುತ್ತೇನೆ. ಪ್ರತಿಯೊಬ್ಬರ ಖಾತೆಗಳಿಗೆ ಲಕ್ಷ ರೂಪಾಯಿ ಜಮೆ ಮಾಡುತ್ತೇನೆ ಎಂದು ಸುಳ್ಳು ಹೇಳುವ ರೋಗ ಹೊಂದಿದ್ದಾರೆ. ಇದರಿಂದಾಗಿ ಎಲ್ಲರೂ ಅವರನ್ನು ಪ್ರೀತಿಸುತ್ತಾರೆ ಎಂದು ಪ್ರಚಾರ ಸಭೆಯೊಂದರಲ್ಲಿ ಅವರು ಹೇಳಿದ್ದಾರೆ.
ಅಲ್ಲದೇ, ಅಡುಗೆ ಅನಿಲದ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಾಂಗ್ರೆಸ್ ಆಡಳಿತಾವಧಿಯಲ್ಲಿಯೇ ಉತ್ತಮವಾಗಿತ್ತು ಎಂದು ಹೇಳಿದ್ದಾರೆ. ಶಿಂಧೆ ಅವರ ಹೇಳಿಕೆಯನ್ನು ಬಿಜೆಪಿ ಟೀಕಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


