ಪ್ರಧಾನಿ ಮೋದಿ ಪ್ರಾಮಾಣಿಕನಾಗಿದ್ದರೆ ರಾಫೆಲ್ ಸಿಬಿಐ ತನಿಖೆಗೆ ಹೆದರಬಾರದು: ಕೇಜ್ರಿವಾಲ್
ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ...

Published On :
ಜೈಪುರ್: ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ದೆಹಲಿ ಮುಖ್ಯಮಂತ್ರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, ಒಂದು ವೇಳೆ ಮೋದಿ ಪ್ರಾಮಾಣಿಕರಾಗಿದ್ದರೆ ಸಿಬಿಐ ತನಿಖೆಗೆ ಹೆದರಬಾರದು ಎಂದು ಹೇಳಿದ್ದಾರೆ.
ಇಂದು ರಾಜಸ್ಥಾನದ ಜೈಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಸಿಎಂ, ಪ್ರಧಾನಿ ಮೋದಿ ಅವರು ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರು ತಮ್ಮ ವಿರುದ್ಧ ಎಫ್ಐಆರ್ ದಾಖಲಿಸುತ್ತಾರೆ ಎಂಬ ಭಯದಿಂದ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ್ದಾರೆ ಎಂದು ಆರೋಪಿಸಿದರು.
36 ಸಾವಿರ ಕೋಟಿ ರುಪಾಯಿ ರಾಫೆಲ್ ಹಗರಣದ ಬಗ್ಗೆ ತನಿಖೆಗೆ ಮುಂದಾಗಿದ್ದ ಒಬ್ಬ ಪ್ರಾಮಾಣಿಕ ಸಿಬಿಐ ಮುಖ್ಯಸ್ಥರನ್ನು ರಾತ್ರೋರಾತ್ರಿ ವಜಾಗೊಳಿಸಲಾಗಿದೆ. ಪ್ರಧಾನಿ ಮೋದಿ ನಿಜಕ್ಕೂ ತಾವು ಪ್ರಾಮಾಣಿಕರಾಗಿದ್ದಾರೆ ಸಿಬಿಐ ತನಿಖೆಗೆ ಹೆದರಬಾರದು ಎಂದಿದ್ದಾರೆ.
ದೆಹಲಿಯ ಜನ ತಮ್ಮ ಮುಖ್ಯಮಂತ್ರಿ ಪ್ರಾಮಾಣಿಕ ಎಂದು ಹೆಮ್ಮೆಯಿಂದ ಹೇಳಿಕೊಳ್ಳಬಹುದು. ಆದರೆ ನೀವು ನಿಮ್ಮ ಪ್ರಧಾನಿ ಪ್ರಾಮಾಣಿಕ ಎಂದು ಹೇಳಿಕೊಳ್ಳುತ್ತೀರಾ? ಎಂದು ಕೇಜ್ರಿವಾಲ್ ಜನರನ್ನು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


