ದೇಶ

ನ.1ರವರೆಗೆ ರಾಕೇಶ್ ಅಸ್ತಾನ ಬಂಧಿಸದಂತೆ ದೆಹಲಿ ಹೈಕೋರ್ಟ್ ಆದೇಶ

ಕಡ್ಡಾಯ ರಜೆಯ ಮೇಲೆ ತೆರಳಿರುವ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಆಸ್ಥಾನಾ ವಿರುದ್ಧದ...

ನ.1ರವರೆಗೆ ರಾಕೇಶ್ ಅಸ್ತಾನ ಬಂಧಿಸದಂತೆ ದೆಹಲಿ ಹೈಕೋರ್ಟ್ ಆದೇಶ
ರಾಕೇಶ್ ಅಸ್ತಾನ
Published On :
ನವದೆಹಲಿ: ಕಡ್ಡಾಯ ರಜೆಯ ಮೇಲೆ ತೆರಳಿರುವ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಆಸ್ಥಾನಾ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮತ್ತು ನವೆಂಬರ್ 1ರ ವರೆಗೆ ಅವರನ್ನು ಬಂಧಿಸದಂತೆ ದೆಹಲಿ ಹೈಕೋರ್ಟ್ ಸೋಮವಾರ ಸಿಬಿಐಗೆ ಆದೇಶಿಸಿದೆ.
ನಿರ್ದೇಶಕ ರಾಕೇಶ್‌ ಆಸ್ಥಾನಾ ಅವರ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ರಾಕೇಶ್ ಆಸ್ಥಾನಾ ಅವರು ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ತನ್ನನ್ನು ಬಂಧಿಸದಂತೆ ಮತ್ತು ತಮ್ಮ ವಿರುದ್ಧದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಜಿಮಿ ವಜಿರಿ ಅವರು, ನವೆಂಬರ್ 1ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ.
ಈಗಾಗಲೇ ರಾಕೇಶ್‌ ಅಸ್ತಾನ ವಿರುದ್ಧ ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಅವರು ದೂರು ದಾಖಲಿಸಿಕೊಂಡು ಕ್ರಮ ಜರುಗಿಸಲು ಮುಂದಾಗಿದ್ದರು. ಈ ಹಿನ್ನೆಲ್ಲೆಯಲ್ಲಿ ಬಂಧನದ ಭೀತಿಯಲ್ಲಿರುವ ಆಸ್ತಾನ ಕೋರ್ಟ್​ ಮೊರೆ ಹೋಗಿದ್ದು, ಪ್ರಕರಣ ರದ್ದುಗೊಳಿಸುವಂತೆ ಮನವಿ ಮಾಡಿದ್ದರು.
ಈ ಹಿಂದೆ ಅಲೋಕ್ ವರ್ಮಾ ವಿರುದ್ಧವೇ ಸುಮಾರು 10 ಪ್ರಕರಣಗಳಲ್ಲಿ ಹಲವರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ರಾಕೇಶ್ ಆಸ್ತಾನ ಸಹ ಆರೋಪಿಸಿದ್ದರು. ಈ ಕುರಿತು ಸಂಪುಟ ಕಾರ್ಯದರ್ಶಿ ಹಾಗೂ ಕೇಂದ್ರ ಜಾಗೃತ ಆಯೋಗಕ್ಕೂ ಪತ್ರ ಬರೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.