ದೇಶ

ಜಯಾ ಸ್ಮಾರಕದ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದರೆ ಮರಳಿ ಪಕ್ಷಕ್ಕೆ ಸೇರ್ಪಡೆ: ಅನರ್ಹ ಶಾಸಕರಿಗೆ ಎಐಎಡಿಎಂಕೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ.ಜಯಲಲಿತಾ ಅವರ ಸ್ಮಾರಕದ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದರೆ...

ಜಯಾ ಸ್ಮಾರಕದ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದರೆ ಮರಳಿ ಪಕ್ಷಕ್ಕೆ ಸೇರ್ಪಡೆ: ಅನರ್ಹ ಶಾಸಕರಿಗೆ ಎಐಎಡಿಎಂಕೆ
ಎಐಎಡಿಎಂಕೆ ನಾಯಕರಾದ ಪನ್ನೀರ್ ಸೆಲ್ವಂ, ಪಳನಿಸ್ವಾಮಿ
Published On :
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜೆ.ಜಯಲಲಿತಾ ಅವರ ಸ್ಮಾರಕದ ಮುಂದೆ ಮಂಡಿಯೂರಿ ಕ್ಷಮೆಯಾಚಿಸಿದರೆ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಎಐಎಡಿಎಂಕೆ ಅನರ್ಹಗೊಂಡ 18 ಶಾಸಕರಿಗೆ ಹೇಳಿದೆ.
2016ರಲ್ಲಿ ಗೆದ್ದ ಈ 18 ಶಾಸಕರ ಗೆಲುವನ್ನು ಜಯಲಲಿತಾ ಅವರಿಗೆ ಅರ್ಪಿಸಿ, ಬಂಡಾಯ ನಾಯಕ ಟಿಟಿವಿ ದಿನಕರನ್ ಜೊತೆ ಗುರುತಿಸಿಕೊಂಡಿದ್ದಕ್ಕೆ ತೀವ್ರ ಪಶ್ಚಾತ್ತಾಪ ಪಟ್ಟುಕೊಂಡು ಪಕ್ಷ ಸಂಘಟನೆಗೆ ಮರಳುವಂತೆ ಎಐಎಡಿಎಂಕೆ ಮುಖವಾಣಿ ನಮಧು ಅಮ್ಮದಲ್ಲಿ ಸೂಚಿಸಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಎಐಎಡಿಎಂ​ಕೆ 18 ಶಾಸಕರನ್ನು ಅನರ್ಹಗೊಳಿಸಿದ್ದ ಸ್ಪೀಕರ್ ಕ್ರಮವನ್ನು ಮದ್ರಾಸ್​ ಹೈಕೋರ್ಟ್​ ಎತ್ತಿಹಿಡಿದಿದೆ. ಇದರಿಂದಾಗಿ ಟಿಟಿವಿ ದಿನಕರನ್​ ಗುಂಪಿಗೆ ಭಾರೀ ಹಿನ್ನಡೆ ಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.