ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ಕೊಡಬೇಕು- ರಾಹುಲ್
ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ, ಈ ವಿಚಾರದಲ್ಲಿ ಕೇರಳ ಕಾಂಗ್ರೆಸ್ ಘಟಕದ ಅಭಿಪ್ರಾಯ ಭಿನ್ನವಾಗಿದೆ.

ಇಂದೋರ್: ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ, ಈ ವಿಚಾರದಲ್ಲಿ ಕೇರಳ ಕಾಂಗ್ರೆಸ್ ಘಟಕದ ಅಭಿಪ್ರಾಯ ಭಿನ್ನವಾಗಿದೆ.
ಮಧ್ಯಪ್ರದೇಶದ ಇಂದೋರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಇದೊಂದು ಭಾವಾನಾತ್ಮಕ ವಿಚಾರವಾಗಿದ್ದು,ಈ ವಿಚಾರದಲ್ಲಿ ಕೇರಳ ಕಾಂಗ್ರೆಸ್ ಘಟಕದ ಅಭಿಪ್ರಾಯ ತಮ್ಮ ವೈಯಕ್ತಿಯ ಆಲೋಚನೆ ಬೇರೆ ಬೇರೆಯಾಗಿದೆ ಎಂದರು.
ಶಬರಿಮಲೆ ದೇಗುಲ ಪ್ರವೇಶ ವಿಚಾರ ಕೇರಳ ಕಾಂಗ್ರೆಸ್ ಘಟಕಕ್ಕೆ ಭಾವನಾತ್ಮಕವಾಗಿದ್ದರೆ, ನನ್ನ ದೃಷ್ಟಿಯಲ್ಲಿ ಎಲ್ಲಾ ಮಹಿಳೆಯರು ಹಾಗೂ ಪುರುಷರಿಗೂ ಸಮಾನವಾಗಿ ಕಾಣಬೇಕು, ಎಲ್ಲಾ ಮಹಿಳೆಯರು ದೇಗುಲದ ಒಳಗಡೆ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


