ದೇಶ

ಪಿ ಚಿದಂಬರಂ ಬಿಜೆಪಿ ಸೇರಲು ಯತ್ನಿಸಿದ್ದರು, ಆದರೆ ಅವರನ್ನು ತಿರಸ್ಕರಿಸಲಾಗಿತ್ತು: ಸುಬ್ರಮಣಿಯನ್ ಸ್ವಾಮಿ

ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ಅವರು ಬಿಜೆಪಿ ಸೇರಲು ಯತ್ನಿಸಿದ್ದರು ಎಂದು ಹೇಳುವ ಮೂಲಕ ಬಿಜೆಪಿ ಮುಖಂಡ ಹಾಗೂ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಹೊಸದೊಂದು ಬಾಂಬ್ ಸಿಡಿಸಿದ್ದಾರೆ.

ಪಿ ಚಿದಂಬರಂ ಬಿಜೆಪಿ ಸೇರಲು ಯತ್ನಿಸಿದ್ದರು, ಆದರೆ ಅವರನ್ನು ತಿರಸ್ಕರಿಸಲಾಗಿತ್ತು: ಸುಬ್ರಮಣಿಯನ್ ಸ್ವಾಮಿ
ಸಂಗ್ರಹ ಚಿತ್ರ
Published On :
ಹೈದರಾಬಾದ್: ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ಅವರು ಬಿಜೆಪಿ ಸೇರಲು ಯತ್ನಿಸಿದ್ದರು ಎಂದು ಹೇಳುವ ಮೂಲಕ ಬಿಜೆಪಿ ಮುಖಂಡ ಹಾಗೂ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಹೊಸದೊಂದು ಬಾಂಬ್ ಸಿಡಿಸಿದ್ದಾರೆ.
ಹೈದರಾಬಾದ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪಿ ಚಿದಂಬರಂ ಹಲವು ಹಗರಣಗಳಲ್ಲಿ ಭಾಗಿಯಾಗಿದ್ದು, ಅವರು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ನಾನಾ ಸರ್ಕಸ್ ಮಾಡುತ್ತಿದ್ದಾರೆ. ಅದರೆ ಅವರ ಜೈಲುವಾಸ ತಪ್ಪಿಸಿಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸ್ವಾಮಿ ಹೇಳಿದ್ದಾರೆ.
'ವಿವಿಧ ಹಗರಣಗಳಲ್ಲಿ ಪಾಲುದಾರರಾಗಿರುವ ಚಿದಂಬರಂ, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ವಿವಿಧ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಚಿದಂಬರಂ ಜೈಲಿಗೆ ಹೋಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಅಂತೆಯೇ ನ್ಯಾಷನಲ್ ಹೆರಾಲ್ಡ್‌‌‌ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಹ ಜೈಲು ಸೇರುವುದು ಖಚಿತ ಎಂದು ಸ್ವಾಮಿ ಹೇಳಿದ್ದಾರೆ.
ಪ್ರಸ್ತುತ ಸಿಬಿಐನಲ್ಲಿ ನಡೆಯುತ್ತಿರುವ ವಿವಾದ ಕುರಿತು ವರದಿಗಾರರ ಪ್ರಶ್ನೆಗೆ ಉತ್ತರಿಸಿರುವ ಸ್ವಾಮಿ, ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಸಿಬಿಐ ಮತ್ತಷ್ಟು ಪ್ರಬಲವಾಗಿ ಎದ್ದು ನಿಲ್ಲಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.