ಅಮೆರಿಕಾ ಅಧ್ಯಕ್ಷ ಟ್ರಂಪ್ ಭಾರತ ಭೇಟಿಗೆ ಔಪಚಾರಿಕ ಆಹ್ವಾನ ನೀಡಿರಲಿಲ್ಲ-ಮೂಲಗಳು
ಮುಂದಿನ ವರ್ಷದ ಗಣರಾಜೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದರು . ಆದರೆ. ಔಪಚಾರಿಕವಾಗಿ, ಅಥವಾ ಪತ್ರದ ಮುಖೇನ ಆಹ್ವಾನಿಸರಿಲ್ಲ ಎಂಬುದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: ಮುಂದಿನ ವರ್ಷದ ಗಣರಾಜೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದರು . ಆದರೆ. ಔಪಚಾರಿಕವಾಗಿ, ಅಥವಾ ಪತ್ರದ ಮುಖೇನ ಆಹ್ವಾನಿಸರಿಲ್ಲ ಎಂಬುದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.
ಪ್ರಧಾನಿ ಮೋದಿ ಅಮಂತ್ರಣಕ್ಕೆ ಪೂರ್ವ ನಿಗದಿತ ಕಾರ್ಯಕ್ರಮದಂತೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗುತ್ತಿಲ್ಲ ಎಂದು ಡೊನಾಲ್ಡ್ ಟ್ರಂಪ್ ಹೇಳಿದ ಎರಡು ದಿನಗಳ ಬಳಿಕ ವೈಟ್ ಹೌಸ್ ವಕ್ತಾರರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ.
2017ರಲ್ಲಿ ನರೇಂದ್ರ ಮೋದಿ ಅಮೆರಿಕಾ ಭೇಟಿ ಸಂದರ್ಭದಲ್ಲಿಯೇ ಡೊನಾಲ್ಡ್ ಟ್ರಂಪ್ ಅವರನ್ನು ಆಹ್ವಾನಿಸಿದ್ದರು. ಆದರೆ. ಔಪಚಾರಿಕವಾಗಿ ಅಥವಾ ಪತ್ರ ಮೂಲಕವಾಗಲೀ ಆಹ್ವಾನಿಸಿಲ್ಲ, ಔಪಚಾರಿಕ ಆಮಂತ್ರಣಕ್ಕೂ ಮುನ್ನ ಉಭಯ ದೇಶಗಳು ಅನೌಪಚಾರಿಕವಾಗಿ ವಿಚಾರಣೆ ನಡೆಸಬೇಕಾಗುತ್ತದೆ ಎಂದು ಮೂಲಗಳು ಹೇಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


