ವಿಶ್ವದ ಅತ್ಯಂತ ಎತ್ತರದ ಸರ್ದಾರ್ ವಲ್ಲಭ ಭಾಯ್ ಪಟೇಲ್ ರ 'ಏಕತಾ ಪ್ರತಿಮೆ' ಲೋಕಾರ್ಪಣೆ
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್ ರ ‘ಏಕತಾ ಪ್ರತಿಮೆ’ಯನ್ನು ಬುಧವಾರ ಲೋಕಾರ್ಪಣೆ ಮಾಡಲಾಯಿತು.

Published On :
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್ ರ ‘ಏಕತಾ ಪ್ರತಿಮೆ’ಯನ್ನು ಬುಧವಾರ ಲೋಕಾರ್ಪಣೆ ಮಾಡಲಾಯಿತು.
ಗುಜರಾತ್ ನ ಕೆವಾಡಿಯಾದ ನರ್ಮದಾ ತಟದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತ್ಯಂತ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ದೇಶದ ಮೊದಲ ಉಪ ಪ್ರಧಾನಿ ಪಟೇಲ್ ಅವರು ಭಾರತದ ಏಕೀಕರಣದಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು. ಹೀಗಾಗಿ ಪ್ರತಿಮೆಗೆ ‘ಏಕತೆಯ ಪ್ರತಿಮೆ’ ಎಂದು ನಾಮಕರಣ ಮಾಡಲಾಗಿದೆ. ಸರ್ದಾರ್ ಪಟೇಲ್ ಅವರ ಪ್ರತಿಮೆಯ ಮೂಲಕ ಪ್ರಧಾನಿ ಮೋದಿ ಅವರು ಮತ್ತೊಮ್ಮೆ ‘ಏಕೀಕರಣ’ದ ಸಂದೇಶ ಸಾರಿದ್ದಾರೆ.
ಪ್ರಧಾನಿ ಮೋದಿ ಹಾಗೂ ಇತರ ಗಣ್ಯರು ಪ್ರತಿಮೆಗೆ ಕುಂಭಾಭಿಷೇಕ ಮಾಡುವ ಮೂಲಕ ಅದನ್ನು ಲೋಕಾರ್ಪಣೆ ಮಾಡಿದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ, ಉಪ ಮುಖ್ಯಮಂತ್ರಿ ನಿತಿನ್ ಪಟೇಲ್, ಮಧ್ಯ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮುಂತಾದವರು ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Gujaratಗುಜರಾತ್PM Modiಪ್ರಧಾನಿ ಮೋದಿAhemadabadಅಹ್ಮದಾಬಾದ್Statue of UnitySardar Vallabhbhai Patelಸ್ಟ್ಯಾಚ್ಯೂ ಆಫ್ ಲಿಬರ್ಟಿಸರ್ದಾರ್ ವಲ್ಲಭಭಾಯ್ ಪಟೇಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


