ದೇಶ

ಸರ್ದಾರ್ ಪಟೇಲ್ ಆರ್ ಎಸ್ಎಸ್ ಅನ್ನು ನಿಷೇಧಿಸಿದ್ದರು: ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸ್ವಾತಂತ್ರ್ಯ ಹೋರಾಟಗಾರ ಹಾಗೂ ದೇಶದ ಮೊದಲ ಗೃಹ ಸಚಿವ...

ಸರ್ದಾರ್ ಪಟೇಲ್ ಆರ್ ಎಸ್ಎಸ್ ಅನ್ನು ನಿಷೇಧಿಸಿದ್ದರು: ಕಾಂಗ್ರೆಸ್
ಪಟೇಲ್ ಪ್ರತಿಮೆ ವೀಕ್ಷಿಸುತ್ತಿರುವ ಪ್ರಧಾನಿ ಮೋದಿ
Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸ್ವಾತಂತ್ರ್ಯ ಹೋರಾಟಗಾರ ಹಾಗೂ ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಅತಿ ಎತ್ತರದ ಪ್ರತಿಮೆಯನ್ನು ಲೋಕಾರ್ಪಣೆ ಮಾಡುವ ಮೂಲಕ ಅವರ 143ನೇ ಜನ್ಮ ದಿನವನ್ನು ಆಚರಿಸಿದ್ದಾರೆ. ಆದರೆ ಸರ್ದಾರ್ ಪಟೇಲ್ ಅವರು ಆರ್ ಎಸ್ ಎಸ್ ಅನ್ನು ತೀವ್ರವಾಗಿ ವಿರೋಧಿಸಿದ್ದರು ಎಂದು ಕಾಂಗ್ರೆಸ್ ಹೇಳಿದೆ.
ಇಂದು ಸರ್ದಾರ್ ಪಟೇಲ್ ಅವರು ಬದುಕಿದ್ದರೆ ದೇಶದ ಕಲ್ಯಾಣಕ್ಕಾಗಿ ಮತ್ತೊಂದು ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದರು ಎಂದು ಕಾಂಗ್ರೆಸ್ ತನ್ನ ಅಧಿಕೃತ ಟ್ವೀಟರ್ ಪೇಜ್ ನಲ್ಲಿ ಬರೆದುಕೊಂಡಿದೆ.
1948ರಲ್ಲಿ ಪ್ರಕಟವಾದ ಹಳೆ ನ್ಯೂಸ್ ಪೇಪರ್ ಒಂದರ ಕ್ಲಿಪಿಂಗ್ ಅನ್ನು ಪೊಸ್ಟ್ ಮಾಡಿರುವ ಕಾಂಗ್ರೆಸ್, ಆರ್ ಎಸ್ ಎಸ್ ಮತ್ತು ಅದರ ಸಿದ್ಧಾಂತ ದೇಶಕ್ಕೆ ಅಪಾಯ ಎಂದು ಬರೆದಿದೆ.
1948ರ ಫೆಬ್ರವರಿ 4ರಂದು ಪ್ರಕಟಣೆ ಹೊರಡಿಸಿದ್ದ ಕೇಂದ್ರ ಸರ್ಕಾರ, ದ್ವೇಷ ಮತ್ತು ಹಿಂಸೆಯನ್ನು ಬಿತ್ತುವ ಶಕ್ತಿಗಳ ದೇಶದ ಸ್ವಾತಂತ್ರ್ಯ ಕಸಿಯುತ್ತಿದ್ದು, ಅಂತಹ ಸಂಘಟನೆಗಳನ್ನು ನಿರ್ಮೂಲನೆ ಮಾಡುವ ದೃಷ್ಟಿಯಿಂದ ಆರ್ ಎಸ್ ಎಸ್ ಅನ್ನು ನಿಷೇಧಿಸಲಾಗಿದೆ ಎಂದು ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.