ದೇಶ

ಶಿವಲಿಂಗದ ಮೇಲಿನ ಚೇಳು ಉಲ್ಲೇಖ: ರವಿಶಂಕರ್ ಪ್ರಸಾದ್ ಗೆ ಶಶಿ ತರೂರ್ ನೊಟೀಸ್

ಪ್ರಧಾನಿ ನರೇಂದ್ರ ಮೋದಿ ಆರ್ ಎಸ್ ಎಸ್ ಪಾಲಿಗೆ ಶಿವಲಿಂಗದ ಮೇಲಿನ ಚೇಳಿನಂತಾಗಿದ್ದಾರೆ ಎಂದು ಆರ್ ಎಸ್ಎಸ್ ನಾಯಕರ ಹೇಳಿಕೆಯನ್ನು ಉಲ್ಲೇಖಿಸಿದ್ದ ಶಶಿತರೂರ್ ಈಗ ಇದೇ ವಿಷಯಕ್ಕೆ ಸಂಬಂಧಿಸಿದಂತೆ

ಶಿವಲಿಂಗದ ಮೇಲಿನ ಚೇಳು ಉಲ್ಲೇಖ: ರವಿಶಂಕರ್ ಪ್ರಸಾದ್ ಗೆ ಶಶಿ ತರೂರ್ ನೊಟೀಸ್
ಶಿವಲಿಂಗದ ಮೇಲಿನ ಚೇಳು ಉಲ್ಲೇಖ: ರವಿಶಂಕರ್ ಪ್ರಸಾದ್ ಗೆ ಶಶಿ ತರೂರ್ ನೊಟೀಸ್
Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆರ್ ಎಸ್ ಎಸ್ ಪಾಲಿಗೆ ಶಿವಲಿಂಗದ ಮೇಲಿನ ಚೇಳಿನಂತಾಗಿದ್ದಾರೆ ಎಂದು ಆರ್ ಎಸ್ಎಸ್ ನಾಯಕರ ಹೇಳಿಕೆಯನ್ನು ಉಲ್ಲೇಖಿಸಿದ್ದ ಶಶಿತರೂರ್ ಈಗ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಗೆ ನೊಟೀಸ್ ಕಳಿಸಿದ್ದಾರೆ. 
ಶಶಿತರೂರ್ ತಮ್ಮ ಭಾಷಣವೊಂದರಲ್ಲಿ ಮೋದಿ ಕುರಿತ ಆರ್ ಎಸ್ ಎಸ್ ನಾಯಕರ ಹೇಳಿಕೆಯನ್ನು ಉಲ್ಲೇಖಿಸಿದ್ದರು.  ಶಶಿ ತರೂರ್ ಉಲ್ಲೇಖಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ರವಿಶಂಕರ್ ಪ್ರಸಾದ್, ಶಶಿ ತರೂರ್ ಮೋದಿ ಅವರನ್ನು ಶಿವಲಿಂಗದ ಮೇಲಿನ ಚೇಳಿಗೆ ಹೋಲಿಕೆ ಮಾಡಿ ಪ್ರಧಾನಿ ಅವಮಾನ ಮಾಡಿದ್ದಕ್ಕಾಗಿ ಶಿವಭಕ್ತ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದರು. 
ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಕ್ಕಾಗಿ ಶಶಿ ತರೂರ್ ರವಿಶಂಕರ್ ಪ್ರಸಾದ್ ಅವರಿಗೆ ಲೀಗಲ್ ನೊಟೀಸ್ ಕಳಿಸಿದ್ದು 48 ಗಂಟೆಗಳಲ್ಲಿ ಕ್ಷಮೆ ಯಾಚಿಸಬೇಕು ಇಲ್ಲವೇ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.