ಸೇಲಂ ಬಳಿ ಭೀಕರ ರಸ್ತೆ ಅಪಘಾತ; ಕರ್ನಾಟಕ ಮೂಲದವರು ಸೇರಿ 7 ಮಂದಿ ಸಾವು
ತಿರುವಳ್ಳಗೆ ತೆರಳುತ್ತಿದ್ದ ಖಾಸಗಿ ಬಸ್ಸು ಎದುರಿನಿಂದ ಬರುತ್ತಿದ್ದ ಇನ್ನೊಂದು ಖಾಸಗಿ ಬಸ್ಸಿನ ನಡುವೆ ಸೇಲಂ ಬಳಿ ಮುಖಾಮುಖಿ ಡಿಕ್ಕಿಯುಂಟಾಗಿ ಏಳು ಮಂದಿ ಪ್ರಯಾಣಿಕರು ಮೃತಪಟ್ಟಿದ್ದು ...

ಸೇಲಂ(ತಮಿಳುನಾಡು): ತಿರುವಳ್ಳಗೆ ತೆರಳುತ್ತಿದ್ದ ಖಾಸಗಿ ಬಸ್ಸು ಎದುರಿನಿಂದ ಬರುತ್ತಿದ್ದ ಇನ್ನೊಂದು ಖಾಸಗಿ ಬಸ್ಸಿನ ನಡುವೆ ಸೇಲಂ ಬಳಿ ಮುಖಾಮುಖಿ ಡಿಕ್ಕಿಯುಂಟಾಗಿ ಏಳು ಮಂದಿ ಪ್ರಯಾಣಿಕರು ಮೃತಪಟ್ಟಿದ್ದು ಅವರಲ್ಲಿ ಮೂವರು ಕರ್ನಾಟಕ ಮೂಲದವರು ಮತ್ತು ಇನ್ನು ನಾಲ್ವರು ಕೇರಳ ಮೂಲದವರಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳುನಾಡಿನ ಸೇಲಂ ಬಳಿ ಶನಿವಾರ ನಸುಕಿನ ಜಾವ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರ ಗುರುತು ಸಿಗದಷ್ಟು ದೇಹಗಳು ಛಿದ್ರವಾಗಿದೆ. ಚಾಲಕನ ಅಜಾಗರೂಕತೆ ಮತ್ತು ನಿದ್ದೆಯ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂದು ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಹೇಳಿದ್ದಾರೆ.
ಅಪಘಾತದಲ್ಲಿ 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸುವ ಕೆಲಸ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


