ದಾಬೋಲ್ಕರ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ಸಿಬಿಐ ವಶಕ್ಕೆ
ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಆರೋಪಿಗಳನ್ನು

Published On :
ಪುಣೆ: ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಇಬ್ಬರು ಆರೋಪಿಗಳನ್ನು ಪುಣೆ ಸೆಷನ್ಸ್ ಕೋರ್ಟ್ 10 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ.
ಬಂಧಿತ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳಾದ ರಾಜೇಶ್ ಬಂಗೆರಾ ಮತ್ತು ಅಮಿತ್ ದೆಗ್ವಾಕರ್ ಅವರನ್ನು ಸಿಬಿಐ ವಶಕ್ಕೆ ನೀಡಿದ್ದು, ಮತ್ತೊಬ್ಬ ಆರೋಪಿ ಸಚಿನ್ ಅಂಡುರೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
2013ರ ಆಗಸ್ಟ್ 20 ರಂದು ನರೇಂದ್ರ ದಾಬೋಲ್ಕರ್ ಅವರನ್ನು ಅಮಾನವೀಯವಾಗಿ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಬಾಂಬೆ ಹೈ ಕೋರ್ಟ್ ಆದೇಶದಂತೆ ಸಿಬಿಐ ಅಧಿಕಾರಿಗಳು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


