ದೇಶ

ಜೆಎನ್‌ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಬೆಗುಸಾರೈನಿಂದ ಲೋಕಸಭೆಗೆ ಸ್ಪರ್ಧೆ!

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಬೆಗುಸಾರೈನಿಂದ ಸ್ಪರ್ಧೆ ಮಾಡಲಿದ್ದಾರೆ...

ಜೆಎನ್‌ಯೂ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಬೆಗುಸಾರೈನಿಂದ ಲೋಕಸಭೆಗೆ ಸ್ಪರ್ಧೆ!
ಕನ್ಹಯ್ಯ ಕುಮಾರ್
Published On :
ಪಾಟ್ನಾ: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಬೆಗುಸಾರೈನಿಂದ ಸ್ಪರ್ಧೆ ಮಾಡಲಿದ್ದಾರೆ. 
ಆರ್ಜೆಡಿ ನೇತೃತ್ವದ ಮಹಾಘಟಬಂಧನ್ ನಲ್ಲಿ ಕಾಂಗ್ರೆಸ್, ಎನ್ಸಿಪಿ, ಹೆಚ್ಎಎಂ(ಎಸ್), ಲೋಕತಾಂತ್ರಿಕ್ ಜನತಾದಳ ಮತ್ತು ಎಲ್ಲಾ ಎಡ ಪಂಥಿಯ ಪಾರ್ಟಿಗಳು ಸ್ಪರ್ಧಿಸುತ್ತಿದ್ದು ಇದೇ ಮಹಾಘಟಬಂಧನ್ ನಲ್ಲಿ ಕನ್ಹಯ್ಯ ಕುಮಾರ್ ಸಹ ಬೆಗುಸಾರೈನಿಂದ ಸ್ಪರ್ಧಿಸಲಿದ್ದಾರೆ. 
ಮೂಲಗಳ ಪ್ರಕಾರ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಪುತ್ರ ತೇಜಸ್ವಿ ಯಾದವ್ ಮತ್ತು ಕಾಂಗ್ರೆಸ್ ಮುಖಂಡರು ಕನ್ಹಯ್ಯ ಕುಮಾರ್ ಬೆಗುಸಾರೈನಿಂದ ಸ್ಪರ್ಧಿಸಲು ಸಮ್ಮತಿಸಿದ್ದಾರೆ ಎಂದು ತಿಳಿದುಬಂದಿದೆ. 
ಸಿಪಿಎಂ ವತಿಯಿಂದ ಕನ್ಹಯ್ಯ ಕುಮಾರ್ ಸ್ಪರ್ಧಿಸಲಿದ್ದು ಈ ಮೂಲಕ ಮಹಾಘಟಬಂಧನ್ ನಲ್ಲಿ ಸಾಮಾನ್ಯ ಅಭ್ಯರ್ಥಿ ಸಹ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಕಠಿಣ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ರವಾನಿಸುವ ಉದ್ದೇಶ ಹೊಂದಿದ್ದೇವೆ ಎಂದು ಲಾಲೂ ಕುಟಂಬಸ್ಥರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.