ದೇಶ

ಮಾವೋವಾದಿಗಳೊಂದಿಗೆ ಸಂಪರ್ಕ: ಬಂಧಿತ ಕಾರ್ಯಕರ್ತರ ವಿರುದ್ಧ ಚಾರ್ಜ್ ಶೀಟ್ ಗೆ 90 ದಿನಗಳ ಕಾಲಾವಕಾಶ

ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಬಂಧನಕ್ಕೊಳಗಾಗಿರುವವರ ವಿರುದ್ಧ ಚಾರ್ಜ್ ಶೀಟ್ ದಾಖಲಿಸುವುದಕ್ಕೆ 90 ದಿನಗಳ ಕಾಲಾವಕಾಶ ನೀಡಲಾಗಿದೆ.

ಮಾವೋವಾದಿಗಳೊಂದಿಗೆ ಸಂಪರ್ಕ: ಬಂಧಿತ ಕಾರ್ಯಕರ್ತರ ವಿರುದ್ಧ ಚಾರ್ಜ್ ಶೀಟ್ ಗೆ 90 ದಿನಗಳ ಕಾಲಾವಕಾಶ
ಮಾವೋವಾದಿಗಳೊಂದಿಗೆ ಸಂಪರ್ಕ: ಬಂಧಿತ ಕಾರ್ಯಕರ್ತರ ವಿರುದ್ಧ ಚಾರ್ಜ್ ಶೀಟ್ ಗೆ 90 ದಿನಗಳ ಕಾಲಾವಕಾಶ
Published On :
ಮುಂಬೈ: ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಬಂಧನಕ್ಕೊಳಗಾಗಿರುವವರ ವಿರುದ್ಧ ಚಾರ್ಜ್ ಶೀಟ್ ದಾಖಲಿಸುವುದಕ್ಕೆ 90 ದಿನಗಳ ಕಾಲಾವಕಾಶ ನೀಡಲಾಗಿದೆ. 
ಪುಣೆಯ ಜಿಲ್ಲಾ ಸತ್ರ ನ್ಯಾಯಾಲಯ 90 ದಿನಗಳಲ್ಲಿ ಚಾರ್ಚ್ ಶೀಟ್ ಸಲ್ಲಿಸುವಂತೆ ಸೂಚಿಸಲಾಗಿದೆ. ಇಂಡಿಯನ್ ಅಸೋಸಿಯೇಶನ್ ಆಫ್ ಪೀಪಲ್ಸ್ ವಕೀಲರ (ಐಎಫ್ಎಲ್) ಪ್ರಧಾನ ಕಾರ್ಯದರ್ಶಿ ಅಡ್ವೋ ಸುರೇಂದ್ರ ಗಡ್ಲಿಂಗ್, ನಾಗಪುರ್ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಇಲಾಖೆಯ ಮುಖ್ಯಸ್ಥ ಪ್ರೊಫೆಸರ್ ಶೋಮಾ ಸೇನ್, ವಿದ್ರೋಹಿ ಪತ್ರಿಕೆಯ ಸಂಪಾದಕ ಸುಧೀರ್ ಧವಾಲೆ, ಸಿಒಆರ್ ಪಿಪಿಯ  ರೋಣಾ ವಿಲ್ಸನ್, ಮಹೇಶ್ ರೌತ್ ಭರತ್ ಜನ ಆಂದೋಲನದಿಂದ ಸ್ಥಳಾಂತರಿಸುವ ವಿರೋಧಿ ಕಾರ್ಯಕರ್ತ, ಗಡ್ಚಿರೋಲಿಯ  ಪ್ರಧಾನಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆಯ ಮಾಜಿ ಸದಸ್ಯರನ್ನೊಳಗೊಂಡಂತೆ ಹಲವರನ್ನು ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ  ಬಂಧಿಸಲಾಗಿದೆ. 
ಜ.1 ರಂದು ನಡೆದ ಭೀಮಾ ಕೊರೇಗಾಂವ್ ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಕಾರಣವಾಗಿದ್ದ ಎಲ್ಗಾರ್ ಪರಿಷತ್ ನೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ಕಾರಣಕ್ಕಾಗಿ ಯುಎಪಿಎ ಕಾಯ್ದೆಯ ಅಡಿಯಲ್ಲಿ ಪುಣೆ ಪೊಲೀಸರು ಇವರನ್ನು ಜೂ.06 ರಂದು ಬಂಧಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ 5 ರನ್ನು ಬಂಧಿಸಲಾದ ಹಿನ್ನೆಲೆಯಲ್ಲಿ ಪೊಲೀಸರು ಚಾರ್ಜ್ ಶೀಟ್ ದಾಖಲಿಸಲು ಮತ್ತಷ್ಟು ಕಾಲಾವಕಾಶ ಕೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.