ದೇಶ

ವಿಮಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ: ಮಹಿಳೆ ವಶಕ್ಕೆ!

ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ತಮಿಳ್ಸಾಯಿ ಸೌಂದರರಾಜನ್ ಎದುರು ’ಫ್ಯಾಸಿಸ್ಟ್’ ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ.

ವಿಮಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ: ಮಹಿಳೆ ವಶಕ್ಕೆ!
ವಿಮಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ: ಮಹಿಳೆ ವಶಕ್ಕೆ!
Published On :
ತೂತುಕುಡಿ: ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ತಮಿಳ್ಸಾಯಿ ಸೌಂದರರಾಜನ್ ಎದುರು ’ಫ್ಯಾಸಿಸ್ಟ್’ ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ. 
ವಿಮಾನದಲ್ಲಿ ಈ ಘಟನೆ ನಡೆದಿದ್ದು , ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಕಿರಿಕಿರಿ ಉಂಟುಮಾಡಿದ್ದಕ್ಕಾಗಿ ಸೋಫಿಯಾ(25) ಎಂಬ ಯುವತಿಯನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. 
ಬಂಧಿತ ಯುವತಿ ಕೆನಡಾದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದು, ಭಾರತಕ್ಕೆ ವಾಪಸ್ಸಾಗುತ್ತಿದ್ದರು. ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ತಮಿಳ್ಸಾಯಿ ಸೌಂದರರಾಜನ್ ಹಿಂಭಾಗದಲ್ಲಿ ಕುಳಿತಿದ್ದ ಯುವತಿ ಏಕಾಏಕಿ ಎದ್ದು ನಿಂತು ಕೇಂದ್ರ ಸರ್ಕಾರ ಫ್ಯಾಸಿಸ್ಟ್ ಸರ್ಕಾರ ಎಂದು ಘೋಷಣೆ ಕೂಗಲು ಪ್ರಾರಂಭಿಸಿದಳು.
ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ಬಿಜೆಪಿ ನಾಯಕರಾದ ತಮಿಳ್ಸಾಯಿ ಸೌಂದರರಾಜನ್- ವಿದ್ಯಾರ್ಥಿನಿ ನಡುವೆ ಮಾತಿನ ಚಕಮಕಿ ನಡೆದಿದೆ. ವಿದ್ಯಾರ್ಥಿನಿಯ ಮಾತನ್ನು ಕೇಳಿದ ನಂತರ ತಮಿಳ್ಸಾಯಿ ಸೌಂದರರಾಜನ್ ಆಕೆಯ ಹಿನ್ನೆಲೆ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿನಿಯನ್ನು ವಶಕ್ಕೆ ಪಡೆಯಲಾಗಿದೆ.  ವಿದ್ಯಾರ್ಥಿನಿಯನ್ನು ವಶಕ್ಕೆ ಪಡೆದಿರುವುದರ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.