ಆಗ್ರಾ: ಹಿಂದೂ-ಮುಸ್ಲಿಂ ಒಟ್ಟಿಗೆ ಕೂಡಿ ಕೃಷ್ಣ ಜನ್ಮಾಷ್ಟಮಿ ಆಚರಣೆ!
ಹಿಂದೂ ಮುಸ್ಲಿಂ ಸಮುದಾಯ ಒಟ್ಟಾಗಿ ಸೇರಿ ಕೃಷ್ಣ ಜನ್ಮಾಷ್ಠಮಿ ಆಚರಿಸುವ ಮೂಲಕ ಕೋಮು ಸೌಹಾರ್ದತೆ ಮೆರೆದಿರುವ ಘಟನೆ ಉತ್ತರ ಪ್ರದೇಶದ ...

Published On :
ಉತ್ತರ ಪ್ರದೇಶ: ಹಿಂದೂ ಮುಸ್ಲಿಂ ಸಮುದಾಯ ಒಟ್ಟಾಗಿ ಸೇರಿ ಕೃಷ್ಣ ಜನ್ಮಾಷ್ಠಮಿ ಆಚರಿಸುವ ಮೂಲಕ ಕೋಮು ಸೌಹಾರ್ದತೆ ಮೆರೆದಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ,
ಕಳೆದ 15 ವರ್ಷಗಳಿಂದ 2 ಸಮುದಾಯದವರು ಸೇರಿ ಒಟ್ಟಾಗಿ ಜನ್ಮಾಷ್ಠಮಿ ಆಚರಿಸುತ್ತಿದ್ದಾರೆ.
ನಾವು ಜನ್ಮಾಷ್ಠಮಿಗಾಗಿ ಕೆಲವು ತಿಂಗಳ ಹಿಂದಿನಿಂದ ಸಿದ್ದತೆ ಮಾಡಿಕೊಂಡಿದ್ಜೆವು. ಅಲಂಕಾರ ಸೇರಿದಂತೆ ಎಲ್ಲಾ ಕೆಲಸಗಳನ್ನು ಒಟ್ಟಿಗೆ ಮಾಡುತ್ತೇವೆ. ಹಬ್ಬಗಳನ್ನು ಆಚರಿಸಲು ಯಾವುದೇ ಧರ್ಮ ಜಾತಿಯ ಬೇಧವಿಲ್ಲ, ನಾವು ಕಳೆದ 15 ವರ್ಷದಿಂದ ಒಗ್ಗಟ್ಟಾಗಿ ಆಚರಿಸುತ್ತಿದ್ದು, ಮುಂದೆಯ ನಮ್ಮ ಮಕ್ಕಳು ಇದನ್ನೇ ಮುಂದುವರಿಸಿಕೊಂಡು ಹೋಗುತ್ತಾರೆ ಎಂದು ಶಾದಿಲ್ ಖುರೇಷಿ ಹೇಳಿದ್ದಾರೆ.
ಹರಿಶರಣ್ ಶುಕ್ಲಾ ಎಂಬುವರು ಜನ್ಮಾಷ್ಠಮಿ ಕಾರ್ಯಕ್ರಮ ಆಯೋಜಿಸುತ್ತಾರೆ, ಈ ಮೂಲಕ ಶಾಂತಿ ಸಂದೇಶ ಸಾರಬೇಕು, ಸಮಾಜದಲ್ಲಿ ಪ್ರತಿಯೊಬ್ಬರು ಅಣ್ಣ ತಮ್ಮಂದಿರ ರೀತಿ ಬಾಳಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


