ಸಾಮಾಜಿಕ ಜಾಲತಾಣಗಳಿಂದ ದೂರವಿರಿ: ಯೋಧರಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸಲಹೆ
ಸಾಮಾಜಿಕ ಜಾಲತಾಣಗಳಿಂದ ದೂರವಿರಿ ಎಂದು ಭಾರತೀಯ ಯೋಧರಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಮಂಗಳವಾರ ಸಲಹೆ ನೀಡಿದ್ದಾರೆ...

Published On :
ನವದೆಹಲಿ: ಸಾಮಾಜಿಕ ಜಾಲತಾಣಗಳಿಂದ ದೂರವಿರಿ ಎಂದು ಭಾರತೀಯ ಯೋಧರಿಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಮಂಗಳವಾರ ಸಲಹೆ ನೀಡಿದ್ದಾರೆ.
ಆಧುನಿಕ ಸಮರದಲ್ಲಿ ಮಾಹಿತಿ ಅತ್ಯಂತ ಪ್ರಮುಖವಾಗಿರುತ್ತದೆ. ಇಂದಿನ ಆಧುನಿಕ ಸಮರ ಪ್ರಕಾರದಲ್ಲಿ ಕೃತಕ ಬುದ್ಧಿಮತ್ತೆಯನ್ನು (ಆರ್ಟಿಫಿಶಿಯಲ್ ಇಂಟೆಲಿಜೆನ್ ಅಥವಾ ಎಐ) ಕೂಡ ಸಮರ್ಥವಾಗಿ ಬಳಸಿಕೊಳ್ಳಬೇಕಾದ ಅಗತ್ಯವಿದೆ. ಕೃತಕ ಬುದ್ಧಿಮತ್ತೆಯ ಪ್ರಯೋಜನವನ್ನು ಹತೋಟಿಯಲ್ಲಿಕೊಳ್ಳಬೇಕಾದರೆ, ನಾವು ಸಾಮಾಜಿ ಮಾಧ್ಯಮಗಳ ಮೂಲಕ ತೊಡಗಿಸಿಕೊಳ್ಳಬೇಕು, ಕೃತಕ ಬುದ್ಧಿ ಮತ್ತೆ ಸಾಮಾಜಿಕ ಜಾಲತಾಣಗಳ ಮೂಲಕ ಬರುತ್ತದೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಿಂದ ಯೋಧರು ದೂರವಿರುವಂತೆ ಸೂಚಿಸುವಂತೆ ನಮಗೆ ಸಲಹೆಗಳು ಬಂದಿವೆ. ಯೋಧರು ಸ್ಮಾರ್ಟ್ ಫೋನ್ ಗಳನ್ನು ಬಳಕೆ ಮಾಡದಂತೆ ತಡೆಯಲು ಸಾಧ್ಯವೇ? ಸ್ಮಾರ್ಟ್ ಫೋನ್ ಬಳಕೆಯನ್ನು ತಡೆಯಲು ಸಾಧ್ಯವಾಗದಿದ್ದರೆ, ಅದನ್ನು ಬಳಕೆ ಮಾಡಲು ಬಿಡುವುದೇ ಒಳಿತು. ಆದರೆ, ಶಿಸ್ತುಪಾಲನೆ ಕಡ್ಡಾಯವಾಗಿರುತ್ತದೆ. ಸಾಮಾಜಿಕ ಜಾಲತಾಣಗಳು ಇದ್ದೇ ಇರುತ್ತೇವೆ. ಅವುಗಳನ್ನು ಯೋಧರು ಬಳಕೆ ಮಾಡುತ್ತಾರೆ. ಆದರೆ, ಅವುಗಳನ್ನು ಧನಾತ್ಮಕವಾಗಿ ಬಳಸಿಕೊಳ್ಳುವ ಕಲೆಗಳನ್ನು ಕರಗತ ಮಾಡಿಕೊಳ್ಳಬೇಕಾಗುತ್ತದೆ. ಅದನ್ನೇ ನಮ್ಮ ಅಸ್ತ್ರವನ್ನಾಗಿ ನಾವು ಬಳಸುವುದನ್ನು ಕಲಿಯಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


