ದೆಹಲಿ: ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನಗದು ಬಹುಮಾನ ಹೆಚ್ಚಳ
ಜಕಾರ್ತ್ ನಲ್ಲಿ ಇತ್ತೀಚಿಗೆ ಮುಕ್ತಾಯಗೊಂಡ ಏಷ್ಯನ್ ಗೇಮ್ಸ್ ನ 18 ನೇ ಆವೃತ್ತಿಯಲ್ಲಿ ಪದಕ ಗೆದ್ದ ದೆಹಲಿಯ ಆಟಗಾರರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ನಗದು ಬಹುಮಾನವನ್ನು ಹೆಚ್ಚಿಸಿದೆ.

ನವದೆಹಲಿ : ಜಕಾರ್ತ್ ನಲ್ಲಿ ಇತ್ತೀಚಿಗೆ ಮುಕ್ತಾಯಗೊಂಡ ಏಷ್ಯನ್ ಗೇಮ್ಸ್ ನ 18 ನೇ ಆವೃತ್ತಿಯಲ್ಲಿ ಪದಕ ಗೆದ್ದ ದೆಹಲಿಯ ಆಟಗಾರರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ನಗದು ಬಹುಮಾನವನ್ನು ಹೆಚ್ಚಿಸಿದೆ.
ಪದಕ ವಿಜೇತರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅರವಿಂದ್ ಕೇಜ್ರಿವಾಲ್ ಈ ಘೋಷಣೆ ಮಾಡಿದ್ದಾರೆ.
ಚಿನ್ನದ ಪದಕ ವಿಜೇತರಿಗೆ 20 ಲಕ್ಷದಿಂದ 1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ 14 ಲಕ್ಷದ ಬದಲು 75 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ 10 ಲಕ್ಷದಿಂದ 50 ಲಕ್ಷದವರೆಗೂ ಹೆಚ್ಚಿಸಲಾಗುವುದು ಎಂದು ಹೇಳಿದರು. ಅಲ್ಲದೇ, ಪದಕ ವಿಜೇತರಿಗೆ ನೌಕರಿಗೂ ವ್ಯವಸ್ಥೆ ಮಾಡಲಾಗುವುದು ಎಂದರು.
ಸೇವೆಗೆ ತಕ್ಕಂತಹ ತರಬೇತಿ ನೀಡುವ ಮೂಲಕ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


