ವಿದೇಶ ಪ್ರವಾಸಗಳಲ್ಲಿ ಪ್ರಧಾನಿ ಜೊತೆಗೂಡಿದ್ದ ಖಾಸಗಿ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸಿ: ಎಂಇಎಗೆ ಸಿಐಸಿ
ವಿದೇಶ ಪ್ರವಾಸಗಳಲ್ಲಿ ಪ್ರಧಾನಿ ನರೇಂದ್ರಮೋದಿ ಜೊತೆಗೂಡಿದ್ದ ಖಾಸಗಿ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ನಿರ್ದೇಶಿಸಿದೆ.

ನವದೆಹಲಿ: ವಿದೇಶ ಪ್ರವಾಸಗಳಲ್ಲಿ ಪ್ರಧಾನಿ ನರೇಂದ್ರಮೋದಿ ಜೊತೆಗೂಡಿದ್ದ ಖಾಸಗಿ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ನಿರ್ದೇಶಿಸಿದೆ.
ಪ್ರಧಾನಿ ನರೇಂದ್ರಮೋದಿ 2015-16 ಮತ್ತು 2016-17 ಅವಧಿಯಲ್ಲಿ ವಿದೇಶಕ್ಕೆ ತೆರಳಿದ್ದಾಗ ಅವರ ಜೊತೆಗೂಡಿದ್ದ ಖಾಸಗಿ ವ್ಯಕ್ತಿಗಳ ಹೆಸರು ಜೊತೆಗೆ ವೆಚ್ಚದ ಬಗ್ಗೆ ಮಾಹಿತಿ ನೀಡುವಂತೆ ಕಳೆದ ಅಕ್ಬೋಬರ್ ನಲ್ಲಿ ಕರಾಬಿ ದಾಸ್ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಆದರೆ, ತೃಪ್ತಿಕರವಾದ ಮಾಹಿತಿ ದೊರೆತಿಲ್ಲವಾದ್ದರಿಂದ ಅವರು ಮಾಹಿತಿ ಆಯೋಗಕ್ಕೆ ಮನವಿ ಸಲ್ಲಿಸಿದ್ದರು. ಮಾಹಿತಿ ಪಡೆಯಲು ಅರ್ಜಿದಾರರು 224 ರೂ. ಪಾವತಿಸುವಂತೆ ಸಚಿವಾಲಯ ಬೇಡಿಕೆ ಹಾಕಿದೆ ಎಂದು ವಿಚಾರಣೆ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರು ಹೇಳಿದ್ದಾರೆ ಎಂದು ಮುಖ್ಯ ಮಾಹಿತಿ ಆಯುಕ್ತ ಆರ್. ಕೆ. ಮಥೂರ್ ತಿಳಿಸಿದರು.
ಪ್ರಧಾನಿ ನರೇಂದ್ರಮೋದಿ ಅವರ ವಿದೇಶ ಪ್ರವಾಸಕ್ಕೆ ಸಂಬಂಧಿಸಿದ ದಿನಾಂಕ, ವೇಳೆ ಮತ್ತು ವಿಮಾನಗಳ ವೆಚ್ಚ ಹೊರತುಪಡಿಸಿದರೆ ಉಳಿದ ಯಾವುದೇ ಮಾಹಿತಿ ಇಲ್ಲ ಎಂದು ವಿಚಾರಣೆ ಸಂದರ್ಭದಲ್ಲಿ ಸಚಿವಾಲಯ ಹೇಳಿದೆ.
224 ರೂ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಗಮನ ಹರಿಸಲಾಗುವುದು ಮತ್ತು ಹೊಸ ಮಾಹಿತಿಯನ್ನು ನೀಡುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೇಂದ್ರ ಮಾಹಿತಿ ಆಯೋಗಕ್ಕೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


