ದಕ್ಷಿಣ ಕೊಲ್ಕತ್ತಾದಲ್ಲಿ ಮೇಲ್ಸೇತುವೆ ಕುಸಿತ: ಎಲ್ಲರನ್ನೂ ರಕ್ಷಿಸಲಾಗಿದೆ- ಸಚಿವ ಫಿರ್ಹಾದ್ ಹಕೀಂ
ದಕ್ಷಿಣ ಕೋಲ್ಕತ್ತಾದಲ್ಲಿ ಮಾಜೇರ್ ಹಾಟ್ ಮೇಲ್ಸೇತುವೆ ಏಕಾಏಕಿ ಕುಸಿದುಬಿದ್ದಿದೆ. ಆಲಿಪೋರ್ ನಲ್ಲಿ ಈ ಘಟನೆ ಸಂಭವಿಸಿದ್ದು, ರೈಲ್ವೆ ಹಳಿಯ ಮೇಲೆ ಸೇತುವೆ ಕುಸಿದಿದೆ.

Published On :
ಕೋಲ್ಕತ್ತಾ: ದಕ್ಷಿಣ ಕೋಲ್ಕತ್ತಾದ ತಾರತಲಾದಲ್ಲಿ 40 ವರ್ಷದಷ್ಟು ಹಳೆಯದಾದ ಮಾಜೇರ್ ಹಾಟ್ ಮೇಲ್ಸೇತುವೆ ಭಾಗಶಃ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ರೈಲ್ವೆ ಹಳಿಯ ಮೇಲೆ ಸೇತುವೆ ಕುಸಿದಿದೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಂ, ಗಾಯಗೊಂಡಿರುವ 6 ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವರೆಗೂ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ". ಎಂದು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆದೇಶಿಸಿದ್ದಾರೆ.
ಘಟನೆ ನಡೆದಾಗ ಡಾರ್ಜಿಲಿಂಗ್ ನಲ್ಲಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತಕ್ಷಣವೇ ಕೋಲ್ಕತ್ತಾಗೆ ತೆರಳಿದ್ದಾರೆ. "ಮೇಲ್ಸೇತುವೆ ಕುಸಿದಿರುವುದು ಆತಂಕ ಮೂಡಿಸಿದೆ. ರಕ್ಷಣಾ ಕಾರ್ಯಾಚರಣೆಯ ತಂಡದಿಂದ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಮೇಲ್ಸೇತುವೆ ಅವಶೇಷಗಳಡಿಯಲ್ಲಿ ಮಿನಿ ಬಸ್ ಹಾಗೂ ಖಾಸಗಿ ಕಾರುಗಳು ಸೇರಿರುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


