ಪ್ರೀತಿ ನಿರಾಕರಿಸಿದರೆ ನನಗೆ ಹೇಳಿ, ಹುಡುಗಿಯನ್ನು ಎತ್ತಾಕೊಂಡ್ ಬರ್ತೀನಿ: ಬಿಜೆಪಿ ಶಾಸಕ
ನೀವು ಇಷ್ಟಪಟ್ಟ ಹುಡುಗಿ ನಿಮ್ಮ ಪ್ರೀತಿಯನ್ನು ನಿರಾಕರಿಸಿದರೆ ನನಗೆ ತಿಳಿಸಿ ಅವಳನ್ನು ಎತ್ತಾಕೊಂಡ್ ಬಂದು ನಿಮಗೆ ಒಪ್ಪಿಸುತ್ತೇನೆ ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಮ್ ವಿವಾದಾತ್ಮಕ...

Published On :
ಮುಂಬೈ: ನೀವು ಇಷ್ಟಪಟ್ಟ ಹುಡುಗಿ ನಿಮ್ಮ ಪ್ರೀತಿಯನ್ನು ನಿರಾಕರಿಸಿದರೆ ನನಗೆ ತಿಳಿಸಿ ಅವಳನ್ನು ಎತ್ತಾಕೊಂಡ್ ಬಂದು ನಿಮಗೆ ಒಪ್ಪಿಸುತ್ತೇನೆ ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್ ಕದಮ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರದ ಸುಬರ್ ಬನ್ ಘಟಕೋಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ರಾತ್ರಿ ಆಯೋಜಿಸಲಾಗಿದ್ದ ದಹಿ ಹಂಡಿ ಹೊಡೆಯುವ ಕಾರ್ಯಕ್ರಮದಲ್ಲಿ ಯುವಕರನ್ನು ಉದ್ದೇಶಿಸಿ ರಾಮ್ ಕದಮ್ ಈ ರೀತಿ ಹೇಳಿಕೆ ನೀಡಿದ್ದು ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಹೆಚ್ಚಾಗಿ ಯುವಕರು ನನ್ನ ಬಳಿಗೆ ಹುಡುಗಿ ಪ್ರೀತಿ ನಿರಾಕರಿಸಿದ್ದಕ್ಕಾಗಿ ಸಹಾಯ ಕೇಳಿಕೊಂಡು ಬರುತ್ತಾರೆ. ಹಾಗೇ ನೀವು ಸಹ ಇಷ್ಟಪಟ್ಟ ಯುವತಿಯನ್ನು ವಿವಾಹವಾಗಬೇಕಾದರೇ ಹೇಳಿ ನಾನು ಕಿಡ್ನಾಪ್ ಮಾಡಿಕೊಂಡು ಬಂದು ನಿಮಗೆ ಒಪ್ಪಿಸುತ್ತೇನೆ ಎಂದು ಹೇಳಿದ್ದಾರೆ.
ಬಿಜೆಪಿ ಶಾಸಕರ ಈ ಹೇಳಿಕೆಯ ವಿಡಿಯೋವನ್ನು ಎನ್ಸಿಪಿ ಶಾಸಕ ಜೀತೆಂದ್ರ ಆವ್ಹದ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಕಾನೂನು ರೂಪಿಸಬೇಕಾದರೇ ಈ ರೀತಿ ಬಹಿರಂಗವಾಗಿ ಹೇಳಿಕೆ ನೀಡಿದರೆ ಮಹಿಳೆಯರಿಗೆ ಎಲ್ಲಿದೆ ಸುರಕ್ಷೆ ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


