22 ವರ್ಷಗಳ ಹಳೆಯ ಮಾದಕವಸ್ತು ಮಾರಾಟ ಪ್ರಕರಣ: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸಿಐಡಿ ವಶಕ್ಕೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ ಎಸ್ಎಸ್ ಅನ್ನು ಬಹಿರಂಗವಾಗಿಯೇ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಸಿಐಡಿ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.

Published On :
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ ಎಸ್ಎಸ್ ಅನ್ನು ಬಹಿರಂಗವಾಗಿಯೇ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಸಿಐಡಿ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.
1998ರಲ್ಲಿ ಸಂಜೀವ್ ಭಟ್ ಡಿಸಿಪಿಯಾಗಿ ಕೆಲಸ ಮಾಡುವಾಗ ವಕೀಲರೊಬ್ಬರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಿದ್ದರು. ಅವರ ಮೇಲೆ ನಕಲಿ ಮಾದಕವಸ್ತು ಮಾರಾಟ ಪ್ರಕರಣ ದಾಖಲಿಸಿ ಬಂಧಿಸಿದ್ದರು. ಈ ಪ್ರಕರಣದ ವಿಚಾರಣೆ ಗುಜರಾತ್ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸಿಐಡಿ ಪೊಲೀಸರು ಸಂಜೀವ್ ಭಟ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
2002ರ ಗುಜರಾತ್ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಸೇವೆಯಿಂದ ವಜಾ ಮಾಡಲಾಗಿತ್ತು. ಬಳಿಕ 2015ರಲ್ಲಿ ಸಂಜೀವ್ ಭಟ್ ಅವರನ್ನು ಐಪಿಎಸ್ ಸೇವೆಯಿಂದಲೂ ವಜಾ ಮಾಡಲಾಗಿತ್ತು. ಈ ನಡುವೆ ಸಂಜೀವ್ ಭಟ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ ಎಸ್ಎಸ್ ಅನ್ನು ಬಹಿರಂಗವಾಗಿಯೇ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಸರಣಿ ಲೇಖನ ಬರೆಯುವ ಮೂಲಕ ಸಂಜೀವ್ ಭಟ್ ಸುದ್ದಿಯಾಗುತ್ತಿದ್ದಾರೆ.
ಈ ಹಿಂದೆ ಇದೇ ಸಂಜೀವ್ ಭಟ್ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನ ಮುಂದೆ 'ಜೀ' ಪದ ಬಳಕೆಗೂ ಆಕ್ಷೇಪ ವ್ಯಕ್ತಪಡಿಸಿದ್ದ ಅವರು, ಮೋದಿ ಹೆಸರಿನ ಮುಂದೆ ಜೀ ಪದ ಬಳಕೆ ಮಾಡುತ್ತಿರುವುದೇಕೆ..? ಹಂದಿ ಮತ್ತು ಕತ್ತೆಗಳ ಹೆಸರು ಬರೆಯುವಾಗ ನಾವು ಹಂದಿ ಜೀ, ಕತ್ತೆ ಜೀ ಎಂದು ಸಂಭೋದನೆ ಮಾಡುತ್ತೇವೆಯೇ ಎಂದು ಟ್ವೀಟ್ ಮಾಡಿ ಮೋದಿ ಬೆಂಬಲಿಗರ ಆಕ್ರೋಶಕ್ಕೆ ತುತ್ತಾಗಿದ್ದರು.
Why do most people use ‘ji’ with Modi? Do we ever say Pig ji or Donkey ji ?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Gujaratಗುಜರಾತ್PM Modiಪ್ರಧಾನಿ ಮೋದಿAhmedabadಅಹ್ಮದಾಬಾದ್Sanjiv Bhattಸಂಜೀವ್ ಭಟ್1998 Drugs Case1998ರ ಮಾದಕ ವಸ್ತು ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


