ಕಲಂ 35 (ಎ) ಇತ್ಯರ್ಥವಾಗುವರೆಗೂ ಜಮ್ಮು-ಕಾಶ್ಮೀರ ಪಂಚಾಯತ್ ಚುನಾವಣೆ ಬಹಿಷ್ಕಾರ- ನ್ಯಾಷನಲ್ ಕಾನ್ಫರೆನ್ಸ್
ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ ಕಲಂ 35 (ಎ) ಇತ್ಯರ್ಥವಾಗುವರೆಗೂ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಲು ನ್ಯಾಷನಲ್ ಕಾನ್ಪರೆನ್ಸ್ ಪಕ್ಷ ನಿರ್ಧರಿಸಿದೆ.

ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ ಕಲಂ 35 (ಎ) ಇತ್ಯರ್ಥವಾಗುವರೆಗೂ ಪಂಚಾಯಿತಿ ಚುನಾವಣೆಯನ್ನು ಬಹಿಷ್ಕರಿಸಲು ನ್ಯಾಷನಲ್ ಕಾನ್ಪರೆನ್ಸ್ ಪಕ್ಷ ನಿರ್ಧರಿಸಿದೆ.
ಕಲಂ 35 ಎ ಬಗ್ಗೆ ಕೇಂದ್ರ ಹಾಗೂ ರಾಜ್ಯಸರ್ಕಾರ ಬಗೆಹರಿಸುವವರೆಗೂ ಪಂಚಾಯಿತಿ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಪರೆನ್ಸ್ ಪಾಲ್ಗೊಳ್ಳುವುದಿಲ್ಲ. ನ್ಯಾಯಾಲಯದ ಹೊರಗಡೆ ಕಲಂ 35 ಎ ರಕ್ಷಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಪಾರೂಖ್ ಅಬ್ದುಲ್ಲಾ ಹೇಳಿದ್ದಾರೆ.
ಕಲಂ 35 ( ಎ) ಗೆ ಸಂಬಂಧಿಸಿದಂತೆ ಕೇಂದ್ರಸರ್ಕಾರ ಸ್ಪಷ್ಟನೆ ನೀಡಬೇಕು. ನ್ಯಾಯಾಲಯದಲ್ಲಿ ವಿಳಂಬ ಪ್ರಕ್ರಿಯೆಗೆ ಪಂಚಾಯತ್ ಮತ್ತು ಮುನ್ಸಿಪಲ್ ಚುನಾವಣೆ ಬಳಸಿಕೊಳ್ಳುವುದು ಸಾಕಾಗುವುದಿಲ್ಲ ಎಂದು ಮತ್ತೋರ್ವ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಹೇಳಿದ್ದಾರೆ.
ಜಮ್ಮು -ಕಾಶ್ಮೀರದಲ್ಲಿ ಈ ಮಾಸಾಂತ್ಯಕ್ಕೆ ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಆದಾಗ್ಯೂ, ಇನ್ನೂ ದಿನಾಂಕ ಪ್ರಕಟಗೊಂಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


