ಸುಪ್ರೀಂ ಕೋರ್ಟ್ ಸಮಾನತೆಯ ಮೌಲ್ಯ ಎತ್ತಿಹಿಡಿದಿದೆ: ಶಶಿ ತರೂರ್
ಭಾರತದಲ್ಲಿ ಸಲಿಂಗ ಕಾಮ ಅಪರಾಧ ಎಂದು ಪರಿಗಣಿಸುವ ಐಪಿಸಿ ಸೆಕ್ಷನ್ 377 ಅನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್....

Published On :
ನವದೆಹಲಿ: ಭಾರತದಲ್ಲಿ ಸಲಿಂಗ ಕಾಮ ಅಪರಾಧ ಎಂದು ಪರಿಗಣಿಸುವ ಐಪಿಸಿ ಸೆಕ್ಷನ್ 377 ಅನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಸ್ವಾಗತಿಸಿದ್ದು, ಕೋರ್ಟ್ ಸಮಾನತೆಯ ಮೌಲ್ಯ ಎತ್ತಿಹಿಡಿದಿದೆ ಎಂದು ಗುರುವಾರ ಹೇಳಿದ್ದಾರೆ.
ಇದು ಸೆಕ್ಸ್ ವಿಚಾರ ಅಲ್ಲ. ಸಾಂವಿಧಾನಿಕ ಸ್ವಾತಂತ್ರ್ಯದ ವಿಚಾರ ಎಂದು ಶಶಿ ತರೂರ್ ಅವರು ಎಎನ್ಐಗೆ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ ಮತ್ತು ಇದು ಸರಿಯಾದ ತೀರ್ಪು ಎಂದು ತಾವು ಭಾವಿಸಿರುವುದಾಗಿ ಕಾಂಗ್ರೆಸ್ ನಾಯಕ ಹೇಳಿದ್ದಾರೆ.
ಇನ್ನು ಸಿಪಿಐ-ಎಂ ನಾಯಕಿ ಬೃಂದಾ ಕಾರಟ್ ಸಹ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಇದೊಂದು ಐತಿಹಾಸಿಕ ತೀರ್ಪು ಮತ್ತು ಭಾರತೀಯರ ಗೆಲುವು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


